ಉತ್ತರ ಪ್ರದೇಶ:ಉಮೇಶ್‌ ಪಾಲ್‌ ಅಪಹರಣ ಪ್ರಕರಣದಲ್ಲಿ ಗ್ಯಾಂಗ್​​ಸ್ಟರ್ ಅತೀಕ್‌ ಅಹ್ಮದ್‌ ದೋಷಿ ಎಂದು ಪ್ರಯಾಗರಾಜ್‌ ನ್ಯಾಯಾಲಯ ತೀರ್ಪು ನೀಡಿದೆ. ಅಪರಾಧಿ ಅತೀಕ್ ಅಹ್ಮದ್​​ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.
ಪ್ರಕರಣದಲ್ಲಿ ಅತೀಕ್ ಅಹ್ಮದ್ ಸಹೋದರ ಖಾಲಿದ್ ಅಜೀಂ ಸೇರಿದಂತೆ ಏಳು ಮಂದಿಯನ್ನು ನ್ಯಾಯಾಲಯ ಖುಲಾಸೆಗೊಳಿಸಲಾಗಿದೆ. ನ್ಯಾಯಾಲಯವು ಅತೀಕ್ ಅಹ್ಮದ್, ದಿನೇಶ್ ಪಾಸಿ ಮತ್ತು ಖಾನ್ ಸೌಲತ್ ಹನೀಫ್ ಅವರಿಗೆ ಜೀವಾವಧಿ ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಇದನ್ನೂ ಓದಿ:ಬೀದರ್ | ಲಂಚಕ್ಕೆ ಬೇಡಿಕೆಯಿಟ್ಟ ಗ್ರಾ.ಪಂ ಅಧಿಕಾರಿ; ಹಣವಿಲ್ಲದೆ ತನ್ನ ಎರಡು ಎತ್ತುಗಳನ್ನು ನೀಡಲು ಮುಂದಾದ ರೈತ
2006 ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಲಯದ ವಿಚಾರಣೆಗೆ ಮುಂಚಿತವಾಗಿ, ಅತಿಕ್​ ಅಹ್ಮದ್​ನನ್ನು ಗುಜರಾತ್‌ನ ಸಾಬರಮತಿ ಜೈಲಿನಿಂದ ಬಿಗಿ ಭದ್ರತೆಯ ಮೂಲಕ ಪ್ರಯಾಗ್‌ರಾಜ್‌ನಲ್ಲಿರುವ ನೈನಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಯಿತು.
ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಅತಿಕ್ ಅಹ್ಮದ್​ಗೆ ಮತ್ತೊಂದು ಹಿನ್ನೆಡೆಯಾಗಿದ್ದು, ಉತ್ತರ ಪ್ರದೇಶ ಪೊಲೀಸರ ಕಸ್ಟಡಿಯಲ್ಲಿ ರಕ್ಷಣೆ ಕೋರಿ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ತನ್ನ ಮತ್ತು ತನ್ನ ಕುಟುಂಬ ಸದಸ್ಯರ ಜೀವಕ್ಕೆ ಬೆದರಿಕೆ ಇದೆ ಎಂದು ಅಹ್ಮದ್ ಹೇಳಿಕೊಂಡಿದ್ದ.(ಏಜೆನ್ಸೀಸ್)
ಇದನ್ನೂ ಓದಿ:Success Story | ಇವರು 100ಕ್ಕೂ ಹೆಚ್ಚು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿದ್ದಾರೆ; ಅಂತಿಮವಾಗಿ ಆಯ್ಕೆ ಆಗಿದ್ದು ಕರ್ನಾಟಕ ಫಾರೆಸ್ಟ್​ ಸರ್ವಿಸ್​ಗೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − one =
Remember me
