ನವದೆಹಲಿ:ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯಂದು ದೆಹಲಿ ಸರ್ಕಾರ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಅತಿಶಿ ಅವರು ತ್ರಿವರ್ಣ ಧ್ವಜವನ್ನು ಹಾರಿಸಲಿದ್ದಾರೆ.
ಇದನ್ನೂ ಓದಿ:ವೈದ್ಯೆ ಹತ್ಯೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಪ್ರಿಯಾಂಕಾ ಗಾಂಧಿ ಮನವಿ
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅತಿಶಿ ಅವರಿಗೆ ರಾಷ್ಟ್ರಧ್ವಜಾರೋಹಣ ಮಾಡುವಂತೆ ಹೇಳಿದ್ದಾರೆ ಎಂದು ಪರಿಸರ ಸಚಿವ ಗೋಪಾಲ್ ರಾಯ್ ಸೋಮವಾರ ಹೇಳಿದ್ದಾರೆ.
”ಆ.12ರಂದು ಮುಖ್ಯಮಂತ್ರಿ ಕೇಜ್ರಿವಾಲ್​ರನ್ನು ಭೇಟಿಯಾಗಿದ್ದು, ಆಗಸ್ಟ್ 15ರಂದು ಛತ್ರಸಾಲ್ ಕ್ರೀಡಾಂಗಣದಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ಮಾಡಬೇಕು ಎಂದು ಸಿಎಂ ತಿಳಿಸಿದರು. ಅದಕ್ಕೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಆಡಳಿತ ಇಲಾಖೆಗೆ ಬರೆದ ಪತ್ರದಲ್ಲಿ ರಾಯ್ ತಿಳಿಸಿದ್ದಾರೆ.
ಪ್ರತಿ ವರ್ಷ ದೆಹಲಿ ಸರ್ಕಾರವು ಛತ್ರಸಾಲ್ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಯೋಜಿಸುತ್ತದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ತ್ರಿವರ್ಣ ಧ್ವಜಾರೋಹಣ ಮಾಡುತ್ತಾರೆ.
ಆದರೆ ಈ ಬಾರಿ ಅತಿಶಿ ಧ್ವಜಾರೋಹಣ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಕೇಜ್ರಿವಾಲ್ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಪತ್ರ ಬರೆದಿದ್ದಾರೆ ಎಂದು ಇದೇ ತಿಂಗಳ 7 ರಂದು ‘ಆಪ್’ ಪ್ರಕಟಿಸಿತು. ಈ ನಡುವೆ ಧ್ವಜಾರೋಹಣಕ್ಕೆ ಸಂಬಂಧಿಸಿದಂತೆ ಎಎಪಿಯಿಂದ ಯಾವುದೇ ಮಾಹಿತಿ ಬಂದಿಲ್ಲ ಎಂದು ಎಲ್ಜಿ ಕಚೇರಿ ತಿಳಿಸಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾರೆ.
ನಕಲಿ ಟಿಕೆಟ್ ಬಳಸಿ ವಿಮಾನಯಾನಕ್ಕೆ ಯತ್ನ ​..ಇಬ್ಬರ ಬಂಧನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
