ಜೈಪುರ:ಕರೊನಾ ಎರಡನೇ ಅಲೆ ದೇಶಾದ್ಯಂತ ತನ್ನ ಅಬ್ಬರವನ್ನು ಮುಂದುವರಿಸಿದೆ. ಎರಡನೇ ಅಲೆಯಲ್ಲಿ ಮಧ್ಯ ವಯಸ್ಕರಿಗೆ ಹೆಚ್ಚಿನ ಪರಿಣಾಮ ಉಂಟಾಗಿದ್ದು, ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚಿ ಎಫೆಕ್ಟ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ. ಆದರೆ ಇದರ ಮಧ್ಯೆ ಎರಡನೇ ಅಲೆಯಲ್ಲೇ ಹೆಚ್ಚು ಮಕ್ಕಳಿಗೆ ಸೋಂಕು ಕಾಣಿಸಿಕೊಂಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಕಳೆದ 21 ದಿನಗಳಲ್ಲಿ ಬರೋಬ್ಬರಿ 341 ಮಕ್ಕಳಲ್ಲಿ (18 ವರ್ಷ ಒಳಗಿನವರು) ಕರೊನಾ ಸೋಂಕು ದೃಢವಾಗಿದೆ. ಆದರೆ ಅದೃಷ್ಟವಶಾತ್​ ಯಾವ ಮಕ್ಕಳಲ್ಲೂ ಗಂಭೀರ ಪರಿಣಾಮ ಕಂಡುಬಂದಿಲ್ಲ ಎನ್ನಲಾಗಿದೆ. ಆದರೆ ಇದು ಮೂರನೇ ಅಲೆಯೂ ಆಗಿರಬಹುದು ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೌಸಾ ಜಿಲ್ಲೆಯಲ್ಲಿ ಮೇ ತಿಂಗಳಲ್ಲಿ ಇಲ್ಲಿಯವರೆಗೆ 6,288 ಪ್ರಕರಣ ಕಾಣಿಸಿಕೊಂಡಿದೆ. ಸೋಂಕು ಪತ್ತೆಯಾಗಿರುವ ಮಕ್ಕಳ ಮನೆಯಲ್ಲೂ ಸೋಂಕಿತರಿದ್ದು, ಅವರಿಂದಲೇ ಮಕ್ಕಳಿಗೂ ಸೋಂಕು ಹರಡಿರಬಹುದು ಎನ್ನಲಾಗಿದೆ. ಜಿಲ್ಲೆಯಲ್ಲಿ ಮೂರನೇ ಅಲೆ ನಿಯಂತ್ರಣಕ್ಕೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದ್ದೇವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. (ಏಜೆನ್ಸೀಸ್)
ಅಮ್ಮನ ನೆನಪಿರುವ ಫೋನು ಕೊಡಿ ಎಂದ ಬಾಲಕಿಗೆ ಹೊಸ ಫೋನ್​ ಕೊಡಿಸಿದ ಕಾಂಗ್ರೆಸ್​! ಸಿಟ್ಟಿಗೆದ್ದ ನೆಟ್ಟಿಗರು

ಕಾರು ಮಾರೋಕೆ ಫೋಟೋ ಹಾಕುವಾಗ ಗುಪ್ತಾಂಗದ್ದೂ ಫೋಟೋ ಹಾಕಿಬಿಟ್ಟ! ಮಾರಾಟ ಆಗಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
