ರಾಂಚಿ:ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದು ಒಂದೇ ಕುಟುಂಬದ ಐದು ಮಂದಿ ದುರಂತ ಸಾವಿಗೀಡಾಗಿರುವ ದಾರುಣ ಘಟನೆ ಜಾರ್ಖಂಡ್​ ರಾಜ್ಯದ ದಿಯೋಘರ್​ನ​ ಸಿಕಾತಿಯಾ​ ಬ್ಯಾರೆಜ್​ನಲ್ಲಿರುವ ಸೇತುವೆಯಲ್ಲಿ ನಡೆದಿದೆ.
ದಿಯೋಘರ್​ನ ಅಸಾನ್ಸೋಲ್​ ಸಂಕುಲ್​ ಗ್ರಾಮದಿಂದ ಗಿರಿಧಿಹ್​ ಜಿಲ್ಲೆಗೆ ತೆರಳುತ್ತಿದ್ದ ಎಸ್​ಯುವಿ ಕಾರು ಅಪಘಾತಕ್ಕೀಡಾಗಿ ಈ ದುರ್ಘಟನೆ ಸಂಭವಿಸಿದೆ. ಕಾರು ಚಾಲನೆ ವೇಳೆ ಚಾಲಕ ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ ಸಂದರ್ಭದಲ್ಲಿ ನಿಯಂತ್ರಣ ಕಳೆದುಕೊಂಡ ಕಾರು ನದಿಗೆ ಬಿದ್ದಿತು ಎಂದು ವರದಿಯಾಗಿದೆ. ಚಾಲಕ ಓರ್ಬ ಇಂಜಿನಿಯರ್​ ಎಂದು ತಿಳಿದುಬಂದಿದೆ.
ಮಾಹಿತಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಸ್ಥಳೀಯರ ನೆರವಿನಿಂದ ಕಾರನ್ನು ನದಿಯಿಂದ ಹೊರಗೆ ತೆಗೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ದಿಯೋಘರ್​ ಸದಾರ್​ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಅಪಘಾತ ಸಂಬಂಧ ಸಂಪೂರ್ಣ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
#WATCH| Five people of a family died after their car fell off a bridge at Sikatiya barrage in Jharkhand's Deogharpic.twitter.com/eEuc3PhCur
— ANI (@ANI)October 24, 2023

ಇಂದು ಮುಂಜಾನೆ ತಮಿಳುನಾಡಿನಲ್ಲಿ ಕಾರೊಂದು ಬಸ್‌ಗೆ ಡಿಕ್ಕಿ ಹೊಡೆದು ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ತಿರುವಣ್ಣಾಮಲೈನ ಕೃಷ್ಣಗಿರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಈ ಅಪಘಾತ ಸಂಭವಿಸಿತು. ಪುದುಚೇರಿ ಗ್ಲ್ಯೂ ತಯಾರಿಕಾ ಕಂಪನಿಯಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಸುಮೋ ವಾಹನ ತಮಿಳುನಾಡಿನ ಸರ್ಕಾರಿ ಬಸ್​ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತು. ಮೃತ ಏಳರಲ್ಲಿ ಆರು ಮಂದಿ ಅಸ್ಸಾಂ ಮೂಲದ ಕಾರ್ಮಿಕರು. ಉಳಿದ ಒಬ್ಬ ಕಾರ್ಮಿಕ ತಮಿಳುನಾಡು ಮೂಲದವನು. ಮೃತರನ್ನು ಚೆಂಗಂ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.(ಏಜೆನ್ಸೀಸ್​)
‘ಭದ್ರತಾ ವ್ಯವಸ್ಥೆ ಬಲಪಡಿಸುವುದನ್ನು ಬಿಟ್ಟು ಬೇರೆ ಆಯ್ಕೆ ಇಲ್ಲ’: ತವಾಂಗ್‌ನಲ್ಲಿ ರಾಜನಾಥ್ ಸಿಂಗ್ ಹೇಳಿಕೆ

10 ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ: ಸಲಿಂಗಕಾಮಿ ಮದ್ರಸಾ ಶಿಕ್ಷಕ ಅರೆಸ್ಟ್​

ಬೆಂಗಳೂರಿಗೆ ಕನಕಪುರ ಸೇರ್ಪಡೆ; ಅಕ್ರಮಗಳನ್ನು ಸಕ್ರಮ ಮಾಡಿಕೊಳ್ಳಲು ನಾಟಕವೇ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + four =
Remember me
