ದೆಹಲಿ:ಭಾರತದ 6 ರಾಜ್ಯಗಳ ವಿದ್ಯಾರ್ಥಿಗಳಿಗೆ ಆಸ್ಟ್ರೇಲಿಯಾದ ಹಲವು ವಿಶ್ವವಿದ್ಯಾಲಯಗಳು ತಾತ್ಕಾಲಿಕವಾಗಿ ನಿಷೇಧವನ್ನು ಹೇರಿವೆ. ಅಲ್ಲದೇ ಈ ಆರು ರಾಜ್ಯಗಳಿಂದ ಬಂದ ವಿದ್ಯಾರ್ಥಿಗಳ ಪ್ರವೇಶಾತಿಯನ್ನು ನಿಲ್ಲಿಸುವಂತೆ ಫೆಡರೇಶನ್ ವಿಶ್ವವಿದ್ಯಾಲಯ ಮತ್ತು ವೆಸ್ಟರ್ನ್ ಸಿಡ್ನಿ ವಿಶ್ವವಿದ್ಯಾಲಯವು ಶಿಕ್ಷಣ ಏಜೆಂಟರಿಗೆ ಸೂಚನೆ ನೀಡಿದೆ.
ಉತ್ತರಾಖಂಡ, ಉತ್ತರ ಪ್ರದೇಶ, ಪಂಜಾಬ್, ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರದ ವಿದ್ಯಾರ್ಥಿಗಳ ಪ್ರವೇಶಾತಿಯನ್ನು ತಡೆಹಿಡಿಯಲಾಗಿದ್ದು, ಅಕ್ರಮ ವೀಸಾದಲ್ಲಿ ಗಮನಾರ್ಹ ಏರಿಕೆಯಾಗಿರುವುದೇ ಈ ನಿಷೇಧಕ್ಕೆ ಕಾರಣವಾಗಿದೆ. ವೀಸಾ ಸಲುವಾಗಿ ಸುಳ್ಳು ಪ್ರಮಾಣ ಪತ್ರ ಹಾಗೂ ದಾಖಲೆ ಪ್ರಮಾಣ ಪತ್ರಗಳನ್ನು ಒದಗಿಸುತ್ತಿರುವುದು ಕೂಡ ಕಂಡು ಬಂದಿದೆ.
ಇದನ್ನೂ ಓದಿ:ಮುಖಂಡರಿಂದ ಮನವಿ ಸಲ್ಲಿಕೆ
ಆಸ್ಟ್ರೇಲಿಯಾ ಸರ್ಕಾರ ಹಾಗೂ ಅಲ್ಲಿನ ಕೆಲವು ವಿಶ್ವವಿದ್ಯಾನಿಲಯಗಳು ಭಾರತದ ಕೆಲವು ರಾಜ್ಯಗಳ ಜನರು ವಲಸೆ ಬರಲು ಶಿಕ್ಷಣವನ್ನು ಹಿಂಬಾಗಿಲಿನಂತೆ ಬಳಸುತ್ತಿದ್ದಾರೆ ಎಂದು ಆರೋಪಿಸಿವೆ. ವಿದ್ಯಾರ್ಥಿಗಳ ವೀಸಾ ಅರ್ಜಿಗಳನ್ನು ವಿಶ್ವವಿದ್ಯಾನಿಲಯ ಸ್ವೀಕರಿಸಿದ ನಂತರವೂ ಆಸ್ಟ್ರೇಲಿಯಾದ ವಲಸೆ ವಿಭಾಗವು ಹಲವರ ವೀಸಾ ಅರ್ಜಿಗಳನ್ನು ತಿರಸ್ಕರಿಸಿದೆ. ಅರ್ಜಿದಾರರು ನಿಜವಾಗಿ ಅಧ್ಯಯನಕ್ಕಾಗಿ ಬರುತ್ತಿದ್ದಾರೆಂದು ಸಾಬೀತುಪಡಿಸಲು ಸಾಧ್ಯವಾಗದೇ ಇರುವುದು ಹಾಗೂ ಅನೇಕ ಜನರು ವಿಶ್ವವಿದ್ಯಾಲಯದ ಶಿಕ್ಷಣದಿಂದ ಹೊರಗುಳಿದಿರುವುದನ್ನು ಅಲ್ಲಿನ ಸರ್ಕಾರ ಗಮನಿಸಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + eighteen =
Remember me
