ದೆಹಲಿ:ಅವಧೇಶ್ ರೈ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್​ಸ್ಟರ್​ ಹಾಗೂ ರಾಜಕಾರಣಿ ಮುಕ್ತಾರ್ ಅನ್ಸಾರಿ ತಪ್ಪಿತಸ್ಥ ಎಂದು ಸಾಬೀತಾದ ಬೆನ್ನಲ್ಲೇ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.
ಇದನ್ನೂ ಓದಿ:ಡಿಕೆಶಿ ಕರೆದಿದ್ದ ಬೆಂಗಳೂರಿನ ಸರ್ವಪಕ್ಷ ನಾಯಕರ ಸಭೆ ವಿಫಲ? ಕಾಂಗ್ರೆಸ್​ ಶಾಸಕರು ಗೈರು
1991ರ ಆಗಸ್ಟ್ 3ರಂದು ಕಾಂಗ್ರೆಸ್ ನಾಯಕ ಮತ್ತು ಮಾಜಿ ಶಾಸಕ ಅಜಯ್ ರೈ ಅವರ ಸಹೋದರ ಅವಧೇಶ್ ರೈಯನ್ನು ವಾರಣಾಸಿಯಲ್ಲಿ ಆತನ ಮನೆಯ ಹೊರಗೆ ಗುಂಡಿಕ್ಕಿ ಕೊಲ್ಲಲಾಗಿತ್ತು. ಈ ಸಂಬಂಧ ಅನ್ಸಾರಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಕುರಿತು ಸುದೀಘವಾಗಿ ವಿಚಾರಣೆ ನಡೆಸಿದ ನ್ಯಾಯಾಲಯವು ಇಂದು ತನ್ನ ತೀರ್ಪನ್ನು ನೀಡಿದೆ.
ಈ ಕುರಿತು ಮಾತನಾಡಿದ ಅಜಯ್​ ರೈ, ನಾನು, ನನ್ನ ತಂದೆ-ತಾಯಿ, ಅವಧೇಶ್ ಅವರ ಮಗಳು ಮತ್ತು ಇಡೀ ಕುಟುಂಬದ ಹಲವು ವರ್ಷಗಳ ಕಾಯುವಿಕೆಗೆ ಅಂತ್ಯವಾಗಿದೆ. ಇಂದು ನ್ಯಾಯಾಲಯವು ನನ್ನ ಸಹೋದರನ ಹತ್ಯೆ ಪ್ರಕರಣದಲ್ಲಿ ಮುಕ್ತಾರ್‌ನನ್ನು ದೋಷಿ ಎಂದು ಘೋಷಿಸಿದೆ ಎಂದು ಹೇಳಿದ್ದಾರೆ.
ಈ ಹಿಂದೆ ಉತ್ತರ ಪ್ರದೇಶದ ದರೋಡೆಕೋರರು ಮತ್ತು ಸಮಾಜ ವಿರೋಧಿ ಚಟುವಟಿಕೆಗಳ ತಡೆಗಟ್ಟುವಿಕೆ ಆಕ್ಟ್ ಪ್ರಕರಣದಲ್ಲಿ ಘಾಜಿಯಾಪುರ ನ್ಯಾಯಾಲಯವು ಅನ್ಸಾರಿಯನ್ನು ತಪ್ಪಿತಸ್ಥರೆಂದು ಘೋಷಿಸಿ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − eleven =
Remember me
