ಬೆಂಗಳೂರು:ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ದೇವಾಲಯದ ನಿರ್ಮಾಣ ಬಹುತೇಕ ಪೂರ್ಣಗೊಂಡಿದೆ. ಅಯೋಧ್ಯೆಯ ರಾಮ ಮಂದಿರದಲ್ಲಿ ಶ್ರೀರಾಮನ ಪ್ರತಿಮೆ ಸ್ಥಾಪನೆಗೆ ಸಮಯವನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
2024  ಜನವರಿ 22ರಂದು ಅಭಿಜಿತ್ ಲಗ್ನ, ಮೃಗಶಿರ ನಕ್ಷತ್ರದಲ್ಲಿ 12:20 ಕ್ಕೆ ಶ್ರೀರಾಮನ ಮೂರ್ತಿಯ ಪ್ರಾಣ ಪ್ರತಿಷ್ಠೆ ನಡೆಯುತ್ತದೆ.ಶ್ರೀರಾಮನ ಪ್ರಾಣಪ್ರತಿಷ್ಠಾ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಈ ಆಚರಣೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ನೀಡಲು ನಿರ್ಧರಿಸಿದೆ.
ಆಚರಣೆ ಅಭಿಯಾನ ನಾಲ್ಕು ಹಂತಗಳಾಗಿ ವಿಂಗಡನೆ:
ಜ. 22ರ ಕಾರ್ಯಕ್ರಮಗಳಿಗೆ ಸಿದ್ಧತೆ ನಡೆಸಲಾಗುತ್ತದೆ. ಇದಕ್ಕಾಗಿ ಕಾರ್ಯಾಚರಣೆ ಸಮಿತಿ ಮತ್ತು ಜಿಲ್ಲಾ ಮತ್ತು ಬ್ಲಾಕ್ ಮಟ್ಟದಲ್ಲಿ 10 ತಂಡ ರಚಿಸಲಾಗಿದೆ. ಅವುಗಳು 250 ಸಭೆ ನಡೆಸಲಿವೆ.
ಜ. 1ರಿಂದ ಆರಂಭವಾಗಲಿದೆ. ಈ ಅವಧಿಯಲ್ಲಿ ಹತ್ತು ಕೋಟಿ ಕುಟುಂಬಗಳನ್ನು ಸಂಪರ್ಕಿಸಿ, ರಾಮನ ಮೂರ್ತಿಯ ಫೋಟೋ, ಅಕ್ಷತೆ ಮತ್ತು ಸಮಾರಂಭದ ಕರಪತ್ರವನ್ನು ಹಂಚಲಾಗುತ್ತದೆ. ಮನೆಗಳಲ್ಲಿ ದೀಪ ಬೆಳಗುವ ಮೂಲಕ ಸಂಭ್ರಮ ಆಚರಿಸುವಂತೆ ಮನವಿ ಮಾಡಲಾಗುತ್ತದೆ.
22ರಂದು ಆರಂಭ. ದೇಶವಾಸಿಗಳು ಮನೆಯಲ್ಲಿಯೇ ಪ್ರತಿಷ್ಠಾಪನೆಯ ಸಂಭ್ರಮ ಆಚರಿಸಲಿದ್ದಾರೆ. ಜ. 26ರಿಂದ ಫೆ.22ರ ವರೆಗೆ ದೇಶದ ವಿವಿಧ ಭಾಗಗಳಿಂದ ಭಕ್ತರಿಗೆ ಮಂದಿರ ದರ್ಶನಕ್ಕೆ ಪ್ರಯಾಣ ಅವಕಾಶ, ಮಿರ್ಶವಾಗಿ ಅವರ್ ಪ್ರಾಂತ್ಯದ ಕಾರ್ಮಿಕರಿಂದ ಜ.31, ಫೆ. 1ರಂದು ಮಂದಿರ ಭೇಟಿ ಇರುತ್ತದೆ.
ಅಯೋಧ್ಯೆಯಲ್ಲಿ ಪ್ರದಕ್ಷಿಣೆ ನಡೆಯುತ್ತಿದೆ. ಅದಕ್ಕಾಗಿ ತಾತ್ಕಾಲಿಕ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ಮಠಗಳು ಮತ್ತು ದೇವಾಲಯಗಳನ್ನು ಸುಂದರವಾಗಿ ಅಲಂಕರಿಸಲಾಗಿದೆ. ಬಸ್ಸುಗಳಲ್ಲಿ ಬರುವವರು ಫೈಜಾಬಾದ್ ಬಸ್ ನಿಲ್ದಾಣವನ್ನು ತಲುಪುತ್ತಾರೆ. ರೈಲಿನಲ್ಲಿ ಬರುವವರು ಅಯೋಧ್ಯೆ ಕಂಟೋನ್ಮೆಂಟ್ಗೆ ಹೋಗಿ ಅಯೋಧ್ಯಾ ಧಾಮ್ ಸೇರಿಕೊಳ್ಳಬಹುದು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
