ಲಖನೌ:ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣ ಮಾಡಲು ಉತ್ತರಪ್ರದೇಶ ಸರ್ಕಾರವು ನೀಡುವ ಐದು ಎಕರೆ ಭೂಮಿಯನ್ನು ಪಡೆಯಲು ಒಪ್ಪಿದೆ. ಅಲ್ಲದೆ ಆ ಸ್ಥಳದಲ್ಲಿ ಮಸೀದಿ ನಿರ್ಮಾಣಕ್ಕೆ ಟ್ರಸ್ಟ್​ ರಚನೆಗೆ ತೀರ್ಮಾನಿಸಿದೆ.
ಈ ಬಗ್ಗೆ ಉತ್ತರ ಪ್ರದೇಶ ಸುನ್ನಿ ವಕ್ಫ್​ ಮಂಡಳಿ ಅಧ್ಯಕ್ಷ ಝುಫರ್​ ಫಾರುಖಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ. ಟ್ರಸ್ಟ್​ ಮಸೀದಿ ನಿರ್ಮಾಣದ ಜತೆಗೆ ಅ ಪ್ರದೇಶದಲ್ಲಿ ಚಾರಿಟಬಲ್​ ಆಸ್ಪತ್ರೆ, ಸಾರ್ವಜನಿಕ ಗ್ರಂಥಾಲಯ ಮತ್ತು ಇಂಡೋ ಇಸ್ಲಾಮಿಕ್​ ನಾಗರಿಕತೆ ಪರಿಚಯಿಸುವ ಕೇಂದ್ರವನ್ನು ನಿರ್ಮಾಣ ಮಾಡಲಾಗುವುದು ಎಂದು ಮಂಡಳಿ ತಿಳಿಸಿದೆ.
ಇದರ ಜತೆಗೆ ಅಲ್ಲಿ ಇಂಡೋ ಇಸ್ಲಾಮಿಕ್​ ನಾಗರಿಕತೆ ಅಧ್ಯಯನಕ್ಕೆ ಅವಕಾಶ ಕಲ್ಪಿಸಲಾಗುವುದು. ಶೀಘ್ರದಲ್ಲೇ ಟ್ರಸ್ಟ್​ ಸದಸ್ಯರನ್ನು ಘೋಷಣೆ ಮಾಡಲಾಗುವುದು ಎಂದು ವಕ್ಫ್​ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಕಳೆದ ನವೆಂಬರ್​ 9 ರಂದು ಸುಪ್ರೀಂಕೋರ್ಟ್​ ಕೇಂದ್ರ ಸರ್ಕಾರಕ್ಕೆ ನೀಡಿದ್ದ ನಿರ್ದೇಶನದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಟ್ರಸ್ಟ್​ ರಚನೆಗೆ ಸೂಚಿಸಿತ್ತು. ಜತೆಗೆ ಮಸೀದಿ ನಿರ್ಮಾಣಕ್ಕೆ ಪರ್ಯಾಯವಾಗಿ 5 ಎಕರೆ ಜಮೀನು ನೀಡಲು ಸೂಚಿಸಿ, ಅದನ್ನು ವಕ್ಫ್​ ಮಂಡಳಿಗೆ ಹಸ್ತಾಂತರಿಸಬೇಕು, ಅಲ್ಲಿ ಮಸೀದಿ ನಿರ್ಮಿಸಲಿ ಎಂದಿತ್ತು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + eleven =
Remember me
