ಅಯೋಧ್ಯೆ:ಅಯೋಧ್ಯೆ ರಾಮಮಂದಿರ ಆವರಣದಲ್ಲಿ ಮೊಬೈಲ್​ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಶನಿವಾರ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದ್ದು, ಮಂಡಳಿಯು ಈ ಬಗ್ಗೆ ಆದೇಶ ಹೊರಡಿಸಿದೆ.
ಈ ಹಿಂದೆ ದೇವಸ್ಥಾನದೊಳಗೆ ಸಾರ್ವಜನಿಕರು ಮೊಬೈಲಗ್​ ಬಳಸುವುದಮನ್ನು ನಿಷೇಧಿಸಲಾಗಿತ್ತು. ಈಗ ವಿಐಪಿಗಳು ಮತ್ತು ವಿವಿಐಪಿಗಳು ಮೊಬೈಲ್ ಫೋನ್ ಬಳಸುವುದನ್ನು ನಿಷೇಧಿಸಲಾಗಿದೆ.
#WATCH| Ayodhya, Uttar Pradesh: On complete ban on mobile phones in Shri Ram Lalla Temple and premises, temple trustee Anil Mishra says, "Yesterday. we informed the administration in a meeting. Looking at the security and devotees' facilities, the administration and the trust…pic.twitter.com/BRwuQFqS9c
ಇದನ್ನೂ ಓದಿ:ರಣವೀರ್​ ನಾಚಿಕೆ ಇಲ್ಲದವ, ಪ್ಯಾಂಟ್​ ಧರಿಸದೆ ನನ್ನ ಪಕ್ಕದಲ್ಲಿ ಕೂರುತ್ತಿದ್ದ: ಪರಿಣೀತಿ ಚೋಪ್ರಾ
ಈ ಕುರಿತು ಮಾತನಾಡಿರುವ ಟ್ರಸ್ಟಿ ಅನಿಲ್​ ಶರ್ಮಾ, ಭದ್ರತೆಯ ದೃಷ್ಠಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಐಜಿ ಹಾಗೂ ಕಮಿಷನರ್‌ ಜೊತೆಗಿನ ಸಭೆಯಲ್ಲಿ ಮೊಬೈಲ್‌ ಫೋನ್‌ಗಳನ್ನು ಸಂಪೂರ್ಣವಾಗಿ ನಿಷೇಧಿಸುವ ನಿರ್ಧಾರ ಕೈಗೊಳ್ಳಲಾಗಿದ್ದು, ಯಾರಿಗೂ ಯಾವುದೇ ಅನಾನುಕೂಲತೆ ಉಂಟಾಗದಂತೆ ಸಹಕರಿಸಬೇಕು ಎಂದು ವಿನಂತಿಸಿದ್ದಾರೆ.
ರಾಮ ಮಂದಿರಕ್ಕೆ ಬರುವ ಭಕ್ತರ ಮೊಬೈಲ್‌ಗಳನ್ನು ಇಡಲು ಸೂಕ್ತ ವ್ಯವಸ್ಥೆ ಇದೆ. ಜನರು ತಮ್ಮ ಮೊಬೈಲ್ ಜೊತೆಗೆ ಇತರ ಬೆಲೆಬಾಳುವ ವಸ್ತುಗಳನ್ನು ಇಟ್ಟುಕೊಳ್ಳಬಹುದು. ಇಂತಹ ಪರಿಸ್ಥಿತಿಯಲ್ಲಿ ಜನರು ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ದೇವಸ್ಥಾನದ ಆವರಣದಲ್ಲಿ ಸುವ್ಯವಸ್ಥೆ ಕಾಪಾಡಲು ಟ್ರಸ್ಟ್‌ಗೆ ಸಹಕರಿಸಬೇಕು. ಭಕ್ತರು ಲಾಕರ್ ಸೌಲಭ್ಯ ಪಡೆದು ತಮ್ಮ ಮೊಬೈಲ್ ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ಅದರಲ್ಲಿಟ್ಟು ದರ್ಶನ ಪಡೆಯಬಹುದಾಗಿದೆ ಎಂದು ಅನಿಲ್​ ಶರ್ಮಾ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 8 =
Remember me
