ನವದೆಹಲಿ: ಕೇಂದ್ರ ಸಚಿವರು ಒಬ್ಬೊಬ್ಬರಾಗಿ ಕೊವಿಡ್​-19 ಸೋಂಕಿಗೆ ಒಳಗಾಗುತ್ತಿದ್ದಾರೆ.ಇದೀಗ ಆಯುಷ್ ಇಲಾಖೆ ಸಚಿವ ಶ್ರೀಪಾದ್​ ನಾಯ್ಕ್​ ಅವರಲ್ಲಿಯೂ ಕರೊನಾ ದೃಢಪಟ್ಟಿದೆ. ಕೊವಿಡ್​-19 ಸೋಂಕು ತಗುಲಿದ ಐದನೇ ಕೇಂದ್ರ ಸಚಿವರು ಇವರು.
ಟ್ವೀಟ್​ ಮೂಲಕ ತಿಳಿಸಿದ ಶ್ರೀಪಾದ್​ ನಾಯ್ಕ್​ ಅವರು, ನನಗೆ ಯಾವುದೇ ಲಕ್ಷಣಗಳೂ ಇಲ್ಲ. ಆದರೂ ಕೊವಿಡ್​-19 ಟೆಸ್ಟ್​ಗೆ ಒಳಗಾಗಿದ್ದೆ. ಫಲಿತಾಂಶ ಪಾಸಿಟಿವ್​ ಬಂದಿದೆ. ಸದ್ಯ ಆಸ್ಪತ್ರಗೆ ದಾಖಲಾಗಲಿಲ್ಲ. ಮನೆಯಲ್ಲಿಯೇ ಐಸೋಲೇಟ್​ ಆಗಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದ ಎಲ್ಲರೂ ಕೊವಿಡ್​-19 ತಪಾಸಣೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಮೊದಲು ಕೊವಿಡ್​-19 ಸೋಂಕು ತಗುಲಿದ್ದು ಗೃಹ ಸಚಿವ ಅಮಿತ್​ ಷಾಗೆ. ಅವರೀಗ ಚೇತರಿಸಿಕೊಂಡಿದ್ದಾರೆ. ಸದ್ಯ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್​, ಅರ್ಜುನ್​ ಮೇಘ್ವಾಲ್​, ಕೈಲಾಶ್​ ಚೌಧರಿ ಅವರಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿದೆ.ಶ್ರೀಪಾದ್​ ನಾಯ್ಕ್​ ಅವರು ಏಪ್ರಿಲ್​ ನಲ್ಲಿ ಕರೊನಾ ವಿರುದ್ಧ ಹೋರಾಟದಲ್ಲಿ ಆಯುರ್ವೇದ ಪರಿಣಾಮಕಾರಿ ಎಂದು ಪ್ರತಿಪಾದಿಸಿದ್ದರು. (ಏಜೆನ್ಸೀಸ್​)
24ಗಂಟೆಯಲ್ಲಿ 7 ಸಾವಿರಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಗುಣಮುಖ; 113 ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
