ಲಖನೌ:2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದ ಮೇರೆಗೆ ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಹಾಗೂ ಸುರ್​ ವಿಧಾನಸಭಾ ಕ್ಷೇತ್ರದ ಶಾಸಕ ಅಜಂ ಖಾನ್​ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
2019ರ ಲೋಕಸಭೆ ಚುನಾವಣೆ ವೇಳೆ ಉತ್ತರಪ್ರದೇಶದ ರಾಮ್​ಪುರದ ಧನೋರಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯಾನಾಥ್​ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಶಹಜಾದ್​ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.
ಇದನ್ನೂ ಓದಿ:ಜೈಪುರದಲ್ಲಿ ಹಳಿ ತಪ್ಪಿದ ಗೂಡ್ಸ್​ ರೈಲು; ಏಳು ರೈಲುಗಳ ಸಂಚಾರ ಸ್ಥಗಿತ
ಪ್ರಕರಣ ದಾಖಲಿಸಿಕೊಂಡ ಪೊಲೀಸರು FIR ಸಿದ್ದಪಡಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಿದ್ದರು. ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ನ್ಯಾಯಾಲಯವು ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್​ ದೋಷಿ ಎಂದು ತೀರ್ಪು ನೀಡಿದ್ದು, ಎರಡು ವರ್ಷಗಳ ಕಾರಾಗೃಹ ಶಿಕ್ಷೆಯನ್ನು ವಿಧಿಸಿದೆ.
ಶುಕ್ರವಾರವಷ್ಟೇ ಅಜಂ ಖಾನ್​ಗೆ ನೀಡಿದ ಭದ್ರತೆಯನ್ನು ಉತ್ತರಪ್ರದೇಶ ಸರ್ಕಾರ ಹಿಂಪಡೆದಿತ್ತು. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸದೃಢವಾಗಿ ಎದುರಿಸಲು ಸಜ್ಜಾಗುತ್ತಿರುವ ಸಮಾಜವಾದಿ ಪಕ್ಷಕ್ಕೆ ಅಜಂ ಖಾನ್​ ವಿರುದ್ಧದ ತೀರ್ಪು ದೊಡ್ಡ ಹಿನ್ನಡೆಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + thirteen =
Remember me
