ಪಂಜಾಬ್:ಅತಿವೇಗದಲ್ಲಿ ವಾಹನ ಚಲಾಯಿಸಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ ಪಾಕಿಸ್ತಾನದ ಕ್ರಿಕೆಟ್​​ ತಂಡದ ನಾಯಕ ಬಾಬರ್ ಆಜಮ್ ಅವರಿಗೆ ಪೊಲೀಸರು ದಂಡ ವಿಧಿಸಿದ್ದಾರೆ.
ಬಾಬರ್ ಅಜಮ್ ಪಂಜಾಬ್ ಹೆದ್ದಾರಿಯಲ್ಲಿ ಆಡಿ ಕಾರನ್ನು ಅತಿವೇಗವಾಗಿ ಓಡಿಸಿದ್ದಾರೆ. ರಸ್ತೆಯಲ್ಲಿ ನಿಗದಿತ ವೇಗಕ್ಕಿಂತ ಹೆಚ್ಚು ವೇಗವಾಗಿ ವಾಹನ ಚಲಾಯಿಸುವ ಮೂಲಕ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಪಂಜಾಬ್ ಮೋಟರ್ ವೇ ಪೊಲೀಸರು ಅವರ ಕಾರನ್ನು ನಿಲ್ಲಿಸಿ ದಂಡ ವಿಧಿಸಿದೆ. ಆದರೆ, ಎಷ್ಟು ದಂಡ ವಿಧಿಸಲಾಗಿದೆ ಎಂಬುದು ತಿಳಿದುಬಂದಿಲ್ಲ. ಇತ್ತೀಚಿನ ಬೆಳವಣಿಗೆಗಳಿಗೆ ಹಲವಾರು ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ವಿಭಿನ್ನವಾಗಿ ಪ್ರತಿಕ್ರಿಯಿಸಿದ್ದಾರೆ.
ಆದರೆ, ಈ ಪಾಕಿಸ್ತಾನಿ ನಾಯಕ ಸಂಚಾರ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವುದು ಇದೇ ಮೊದಲಲ್ಲ. ಈ ಹಿಂದೆ ನಂಬರ್ ಪ್ಲೇಟ್ ಇಲ್ಲದೇ ವಾಹನ ಚಲಾಯಿಸಿ ಪೊಲೀಸರಿಗೆ ಸಿಕ್ಕಿಬಿದ್ದು ದಂಡ ಹಾಕಿದ್ದರು ಎನ್ನಲಾಗಿದೆ.
ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ 2023ರಲ್ಲಿ ಭಾಗವಹಿಸಲು ಪಾಕಿಸ್ತಾನ ತಂಡ ಬುಧವಾರ ಸಂಜೆ ಹೈದರಾಬಾದ್ ತಲುಪುವ ಸಾಧ್ಯತೆಯಿದೆ. ಕಳೆದ ಕೆಲವು ದಿನಗಳ ವೀಸಾ ಸಮಸ್ಯೆಗಳನ್ನು ತೆರವುಗೊಳಿಸಲಾಗಿದೆ. ಪಾಕಿಸ್ತಾನ ತಂಡದ ಸದಸ್ಯರು ಮತ್ತು ಸಹಾಯಕ ಸಿಬ್ಬಂದಿಗೆ ವೀಸಾ ನೀಡಲು ಭಾರತ ಸರ್ಕಾರ ಸೋಮವಾರ ಒಪ್ಪಿಗೆ ನೀಡಿದೆ. ಇದರೊಂದಿಗೆ ಪಾಕಿಸ್ತಾನ ತಂಡ ಬುಧವಾರ ಬೆಳಗ್ಗೆ ಲಾಹೋರ್ ನಿಂದ ಹೊರಟು ದುಬೈ ಮೂಲಕ ಹೈದರಾಬಾದ್ ತಲುಪಲಿದೆ.
ಶುಕ್ರವಾರ ಹೈದರಾಬಾದ್‌ನ ಉಪ್ಪಲ್ ಸ್ಟೇಡಿಯಂನಲ್ಲಿ ಪಾಕಿಸ್ತಾನ ತಂಡ ನ್ಯೂಜಿಲೆಂಡ್ ವಿರುದ್ಧ ಅಭ್ಯಾಸ ಪಂದ್ಯವನ್ನು ಆಡಲಿದೆ. ಪಾಕಿಸ್ತಾನ ತನ್ನ ಮೊದಲ ಏಕದಿನ ವಿಶ್ವಕಪ್ ಪಂದ್ಯವನ್ನು ನೆದರ್ಲ್ಯಾಂಡ್ಸ್ ವಿರುದ್ಧ ಅಕ್ಟೋಬರ್ 6 ರಂದು ಆಡಲಿದೆ. ಹಾಗೂ ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯ ಅಕ್ಟೋಬರ್ 14 ರಂದು ನಡೆಯಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಈ ಪಂದ್ಯಕ್ಕೆ ವೇದಿಕೆಯಾಗಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + twenty =
Remember me
