ನವದೆಹಲಿ: ಇತ್ತೀಚೆಗೆ ನಡೆದ ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲಿ ದೇಶದ ಗಮನ ಸೆಳೆದಿದ್ದ ಬೇಬಿ ಮಫ್ಲರ್ ಮ್ಯಾನ್​ಗೆ ಅರವಿಂದ ಕೇಜ್ರಿವಾಲ್ ಅವರ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನ ಸಿಕ್ಕಿದೆ.
ಅರವಿಂದ ಕೇಜ್ರಿವಾಲ್ ಅವರು ದೆಹಲಿಯ ಮುಖ್ಯಮಂತ್ರಿಯಾಗಿ ಭಾನುವಾರ ಬೆಳಗ್ಗೆ 10 ಗಂಟೆಗೆ ರಾಮಲೀಲಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಭಾರಿ ಪ್ರಮಾಣದ ಜನ ಸೇರುವ ನಿರೀಕ್ಷೆ ಇದೆ. ಈ ಕಾರ್ಯಕ್ರಮದಲ್ಲಿ ಬೇಬಿ ಮಫ್ಲರ್ ಮ್ಯಾನ್ ವಿಶೇಷ ಅತಿಥಿಯಾಗಿ ಕಾಣಿಸಲಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ಘೋಷಿಸಿದೆ.
ಈ ಸಂಬಂಧ ಆಮ್​ ಆದ್ಮಿ ಪಾರ್ಟಿಯ ಟ್ವಿಟರ್ ಹ್ಯಾಂಡಲ್​ನಲ್ಲಿ ಒಂದು ಟ್ವೀಟ್​ ಗಮನಸಳೆದಿದೆ. ಬಿಗ್​ ಅನೌನ್ಸ್​ಮೆಂಟ್ ಶೀರ್ಷಿಕೆಯ ಟ್ವೀಟ್​ನಲ್ಲಿ ಬೇಬಿ ಮಫ್ಲರ್ ಮ್ಯಾನ್ ಅವರನ್ನು ಫೆಬ್ರವರಿ 16ರಂದು ನಡೆಯುವ ಅರವಿಂದ ಕೇಜ್ರಿವಾಲ್ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂಬ ಸಂದೇಶವಿದೆ.
ಐವತ್ತೊಂದು ವರ್ಷದ ಕೇಜ್ರಿವಾಲ್ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಜನರನ್ನು ಆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಅರವಿಂದ ಕೇಜ್ರಿವಾಲ್ ಮೊದಲ ಬಾರಿ 2013 ಡಿಸೆಂಬರ್ 28ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ 48 ದಿನಗಳ ಕಾಲ ಆಡಳಿತ ನಡೆಸಿದ್ದರು. ಆನಂತರ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿತ್ತು. ಬಳಿಕ 2015ರಲ್ಲಿ ನಡೆದ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 67 ಸ್ಥಾನ ಗೆದ್ದು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಕೇಜ್ರಿವಾಲ್ ಅಧಿಕಾರ ಸ್ವೀಕರಿಸಿದರು. (ಏಜೆನ್ಸೀಸ್)

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − seven =
Remember me
