ನವದೆಹಲಿ:ಬ್ಯಾಡ್ಮಿಂಟನ್​ ಚಾಂಪಿಯನ್​ ಸೈನಾ ನೆಹ್ವಾಲ್​ ಇಂದು ಆಡಳಿತಾರೂಢ ಬಿಜೆಪಿಯನ್ನು ಸೇರಲಿದ್ದಾರೆ ಎಂದು ಪಕ್ಷದ ಮೂಲಗಳು ಬುಧವಾರ ಖಚಿತಪಡಿಸಿವೆ.
ಹರಿಯಾಣದ ಹಿಸ್ಸಾರ್​ ಮೂಲದ ಸೈನಾ ನೆಹ್ವಾಲ್​(29) ಬಿಜೆಪಿ ಸೇರಿದ್ದೇ ಆದಲ್ಲಿ ಪಕ್ಷಕ್ಕೆ ಪ್ರಭಾವಿ ಮಹಿಳೆಯೊಬ್ಬರ ಆಗಮನವಾಗಲಿದೆ. ಪ್ರಖ್ಯಾತ ಕ್ರೀಡಾಪಟು ಆಗಿದ್ದುಮ ಬಹುದೊಡ್ಡ ಅಭಿಮಾನಿಗಳ ಬಳಗ ಹೊಂದಿರುವುದರಿಂದ ಪಕ್ಷಕ್ಕೂ ಹೊಸ ವರ್ಚಸ್ಸು ಬರುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.
ಮಾಜಿ ನಂ 1 ಬ್ಯಾಡ್ಮಿಂಟನ್​ ತಾರೆಯಾಗಿರುವ ನೆಹ್ವಾಲ್​, ದೇಶದ ಅತ್ಯುನ್ನತ ಪ್ರಶಸ್ತಿಗಳಾದ ರಾಜೀವ್​ ಗಾಂಧಿ ಖೇಲ್​ ರತ್ನ ಮತ್ತು ಅರ್ಜುನ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.
ನೆಹ್ವಾಲ್​ 24 ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಜಯಿಸಿದ್ದಾರೆ. ಲಂಡನ್​ನಲ್ಲಿ ನಡೆದ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕವನ್ನು ಗೆದ್ದಿದ್ದರು. ವಿಶ್ವದ ಬ್ಯಾಡ್ಮಿಂಟನ್ ತಾರೆಗಳಲ್ಲಿ 2019ರಲ್ಲಿ 2 ಮತ್ತು 2015ರಲ್ಲಿ 1ನೇ ಸ್ಥಾನದಲ್ಲಿದ್ದರು.​
ತಮ್ಮ ಟ್ವೀಟ್​ಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುತ್ತಿದ್ದುದ್ದು ಬಿಜೆಪಿ ಕಡೆಗಿನ ಅವರ ಆಸಕ್ತಿಯನ್ನು ತೋರುತ್ತಿತ್ತು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − twelve =
Remember me
