ಸೋನೆಪತ್​ (ಹರಿಯಾಣ):ಕಳೆದ ಟೋಕಿಯೊ ಒಲಿಂಪಿಕ್ಸ್​ ಪದಕ ವಿಜೇತ ಕುಸ್ತಿಪಟುಗಳಾದ ಭಜರಂಗ್​ ಪೂನಿಯಾ ಮತ್ತು ರವಿಕುಮಾರ್​ ದಹಿಯಾ ಮುಂಬರುವ ಪ್ಯಾರಿಸ್​ ಒಲಿಂಪಿಕ್ಸ್​ನ ಅರ್ಹತಾ ಸುತ್ತಿನಲ್ಲಿ ಸ್ಪರ್ಧಿಸುವ ಅವಕಾಶದಿಂದ ವಂಚಿತರಾಗಿದ್ದಾರೆ.
ಏಷ್ಯನ್​ ಒಲಿಂಪಿಕ್ಸ್​ ಅರ್ಹತಾ ಮತ್ತು ವಿಶ್ವ ಒಲಿಂಪಿಕ್ಸ್​ ಅರ್ಹತಾ ಕೂಟದಲ್ಲಿ ಭಾರತವನ್ನು ಪ್ರತಿನಿಧಿಸುವ ಕುಸ್ತಿಪಟುಗಳ ಆಯ್ಕೆಗಾಗಿ ನಡೆದ ಟ್ರಯಲ್ಸ್​ನಲ್ಲಿ ಭಜರಂಗ್​ ಮತ್ತು ರವಿ ಸೋಲು ಕಾಣುವುದರೊಂದಿಗೆ ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಅವಕಾಶ ತಪ್ಪಿಸಿಕೊಂಡಿದ್ದಾರೆ.
ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್​ಭೂಷಣ್​ ಸಿಂಗ್​ ವಿರುದ್ಧ ಹೋರಾಟ ಮಾಡುವ ಮೂಲಕ ಇತ್ತೀಚೆಗೆ ಭಾರಿ ಸುದ್ದಿಯಲ್ಲಿದ್ದ ಭಜರಂಗ್​ ಭಾನುವಾರ ನಡೆದ 65 ಕೆಜಿ ವಿಭಾಗದ ಆಯ್ಕೆ ಟ್ರಯಲ್ಸ್​ನ ಸೆಮಿಫೈನಲ್​ನಲ್ಲಿ ರೋಹಿತ್​ ಕುಮಾರ್​ ಎದುರು 1-9ರಿಂದ ಸೋತರು. ಪುರುಷರ 57 ಕೆಜಿ ವಿಭಾಗದ ಆಯ್ಕೆ ಟ್ರಯಲ್ಸ್​ನಲ್ಲಿ ಟೋಕಿಯೊ ಒಲಿಂಪಿಕ್ಸ್​ ರಜತ ವಿಜೇತ ರವಿಕುಮಾರ್​ ಮೊದಲ ಪಂದ್ಯದಲ್ಲೇ ಅಮನ್​ ಸೆಹ್ರಾವತ್​ ವಿರುದ್ಧ 13-14ರಿಂದ ಸೋತರು.
ಕನ್ನಡತಿ ಶ್ರೇಯಾಂಕಾ, ರಿಚಾ ಘೋಷ್​ ಪರಿಶ್ರಮ ವ್ಯರ್ಥ; ಆರ್​ಸಿಬಿಗೆ 1 ರನ್​ ಸೋಲು, ತೂಗುಯ್ಯಾಲೆಯಲ್ಲಿ ಪ್ಲೇಆಫ್​ ಹಾದಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
