ಪಾಣಿಪತ್‌, ಹರಿಯಾಣ:ಬೈಕ್​ನಲ್ಲಿ ಹೋಗುತ್ತಿದ್ದ ಪತಿ ಹಾಗೂ ಪತ್ನಿ ಮೇಲೆ 80 ವರ್ಷ ಹಳೆಯ ಪಾಳುಬಿದ್ದ ಮನೆಯ ಮೇಲಾವರಣವು ದಿಢೀರ್​ ಕುಸಿದ ಪರಿಣಾಮ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರಾಗಿದ್ದು, ಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಪಾಣಿಪತ್‌ನ ಪಚ್ರಂಗ ಬಜಾರ್‌ನಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಲಾರಿ-ಬೈಕ್​ ಡಿಕ್ಕಿ; ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೇ ಸಾವು
ಅಪಘಾತ ಸಂಭವಿಸುವ ವೇಳೆ ಮನೆಯನ್ನು ಕೆಡವಲಾಗುತ್ತಿತ್ತು ಎನ್ನಲಾಗಿದೆ. ಅವಶೇಷಗಳಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿಯನ್ನು ಸುತನ ಗ್ರಾಮದ ಸುಶೀಲ್ ಎಂದು ಗುರುತಿಸಲಾಗಿದೆ. ಕಟ್ಟಡದ ಬಾಲ್ಕನಿ ಕುಸಿಯುವ ಕೆಲವೇ ಸಕೆಂಡ್​ಗಳಿಗೂ ಮುನ್ನ ಬೈಕ್​ನಿಂದ ಪತ್ನಿ ಜಿಗಿದಿದ್ದಾರೆ. ಸಣ್ಣ-ಪುಟ್ಟ ಗಾಯಗಳೊಂದಿಗೆ ಪಾರಾದ ಮಹಿಳೆ ತನ್ನ ಪತಿಯನ್ನು ಕಳೆದುಕೊಂಡಿದ್ದಾರೆ.
ವಾಹನ ದಟ್ಟಣೆಯಿರುವ ಮಾರುಕಟ್ಟೆಯಲ್ಲಿ ತಲ್ಲಣ ಮೂಡಿಸಿದ ಈ ಅವಘಡ ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೆಡವುವ ಸಂದರ್ಭದಲ್ಲಿ ಕಾರ್ಮಿಕರ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಸ್ಥಳೀಯ ಅಂಗಡಿಯ ಮಾಲೀಕರು ಆರೋಪಿಸಿದ್ದಾರೆ,(ಏಜೆನ್ಸೀಸ್).
VIRAL VIDEO | ಸರ್ಪದ ಬಾಲ ಎಳೆದಾಡಿದ ಮಂಗ, ಮುಂದೇನಾಯ್ತು?; ಈ ವಿಡಿಯೋ ನೋಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 3 =
Remember me
