ಪಶ್ಚಿಮ ಬಂಗಾಳ:ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆಯ ನಂತರ, ಭಾನುವಾರ (ಜುಲೈ 9) ಹಿಂಸಾತ್ಮಕ ಘರ್ಷಣೆಗಳು ಭುಗಿಲೆದ್ದಿದ್ದು ಮುರ್ಷಿದಾಬಾದ್‌ನ ಚರಂಡಿಯಲ್ಲಿ ಮೂರು ಮತಪೆಟ್ಟಿಗೆಗಳು ಅನಾಥವಾಗಿ ಬಿದ್ದಿದ್ದವು. ಸ್ಥಳೀಯ ನಿವಾಸಿಯೊಬ್ಬರು, ಚಾಲ್ತಿಯಲ್ಲಿರುವ ಉದ್ವಿಗ್ನ ಪರಿಸ್ಥಿತಿಯ ಕಾರಣ ಹೊರಬರಲು ಸಾರ್ವಜನಿಕರು ಹಿಂಜರಿಯುತ್ತಿದ್ದಾರೆ ಎಂದಿದ್ದು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಿಂದ ಬೆದರಿಕೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
“ಚುನಾವಣೆ ನಂತರ ಇಲ್ಲಿನ ಪರಿಸ್ಥಿತಿ ಚೆನ್ನಾಗಿಲ್ಲ. ಸಾರ್ವಜನಿಕರೂ ಭಯದಿಂದ ಹೊರಬರುತ್ತಿಲ್ಲ. ಜನರು ಭಯಭೀತರಾಗಿದ್ದಾರೆ. ಯಾರಾದರೂ ಹೊರಗೆ ಬಂದರೆ, ಟಿಎಂಸಿ ಬೆದರಿಕೆ ಹಾಕುತ್ತದೆ,” ಎಂದು ಅವರು ANI ಸುದ್ದಿಸಂಸ್ಥೆಗೆ ತಿಳಿಸಿರುತ್ತಾರೆ.
ಪಶ್ಚಿಮ ಬಂಗಾಳದಲ್ಲಿ ನಡೆದ ಗ್ರಾಮೀಣ ಪ್ರದೇಶಗಳಲ್ಲಿ ಮೂರು ಹಂತದ ಪಂಚಾಯತ್ ಚುನಾವಣೆಯ ಸಮಯದಲ್ಲಿ ಕನಿಷ್ಠ 18 ಸಾವುಗಳು ಮತ್ತು ಹಲವಾರು ಹಿಂಸಾಚಾರ ಮತ್ತು ಬೆಂಕಿಯ ಘಟನೆಗಳನ್ನು ವರದಿಯಾಗಿವೆ. ಈ ಚುನಾವಣೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ರಾಜ್ಯದ ಎರಡನೇ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿರುವ ಭಾರತೀಯ ಜನತಾ ಪಕ್ಷ (ಬಿಜೆಪಿ) ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಶನಿವಾರದ ಚುನಾವಣೆ ಅಗ್ನಿಪರೀಕ್ಷೆಯಾಗಿಯೂ ಕಾರ್ಯನಿರ್ವಹಿಸಲಿದೆ.
ಹಿಂಸಾಚಾರದಲ್ಲಿ ಒಂಬತ್ತು ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಟಿಎಂಸಿ ಹೇಳಿಕೊಂಡರೆ, ಮೂವರು ಬೆಂಬಲಿಗರು ಸಾವನ್ನಪ್ಪಿದ್ದಾರೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ಈ ಕುರಿತಾಗಿ ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ. ಬಿಜೆಪಿ ತನ್ನ ಇಬ್ಬರು ಬೆಂಬಲಿಗರ ಹತ್ಯೆ ಮಾಡಲಾಗಿದೆ ಎಂದು ಹೇಳಿಕೊಂಡಿದ್ದು ಸಿಪಿಐ(ಎಂ) ಕೂಡ ತನ್ನ ಇಬ್ಬರು ಸದಸ್ಯರನ್ನು ಕೊಲ್ಲಲಾಗಿದೆ ಎಂದು ಹೇಳಿಕೊಂಡಿದೆ. ಮೃತರಲ್ಲಿ ಇಬ್ಬರಿಗೆ ಯಾವುದೇ ರಾಜಕೀಯ ಸಂಬಂಧವಿಲ್ಲ ಎಂದು ಅದು ಹೇಳಿದೆ.
ಸಾವಿನ ಕುರಿತು ವಿವರವಾದ ವರದಿಗಾಗಿ ಜಿಲ್ಲಾಧಿಕಾರಿಗಳನ್ನು (ಡಿಎಂ) ಕೇಳಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ (ಎಸ್‌ಇಸಿ) ಹೇಳಿದೆ. “ಸಾವಿನ ಬಗ್ಗೆ 24 ಗಂಟೆಗಳ ಒಳಗೆ ವರದಿಗಳನ್ನು ಸಲ್ಲಿಸಲು ನಾವು ಡಿಎಂಗಳನ್ನು ಕೇಳಿದ್ದೇವೆ” ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಮೂರು ಹಂತದ ಪಂಚಾಯತ್ ಚುನಾವಣೆಯಲ್ಲಿ ಒಟ್ಟು 73,887 ಸ್ಥಾನಗಳಿಗೆ ಸ್ಪರ್ಧೆ ನಡೆಯುತ್ತಿದ್ದು, ಒಟ್ಟು 2.06 ಲಕ್ಷ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. 66.28 ರಷ್ಟು ಮತದಾನವಾಗಿದೆ, ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ 5.67 ಕೋಟಿ ಜನರು ಮತದಾನಕ್ಕೆ ಅರ್ಹರಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 5 =
Remember me
