ಬಲೂಚಿಸ್ತಾನ:ನೈಋತ್ಯ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಈದ್ ಮಿಲಾದುನ್ ನಬಿ ಆಚರಣೆ ವೇಳೆ ಸ್ಫೋಟ ಸಂಭವಿಸಿ ಕನಿಷ್ಠ 6 ಜನರು ಸಾವನ್ನಪ್ಪಿದ್ದು, ಸುಮಾರು 30 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಕುರಿತಾಗಿ ಸ್ಥಳೀಯ ಮಾಧ್ಯಮಗಳು ಶುಕ್ರವಾರ ವರದಿ ಮಾಡಿವೆ.
ಬಲೂಚಿಸ್ತಾನದಲ್ಲಿ ಕೆಲವು ದಿನಗಳಿಂದ ಸ್ಫೋಟದ ಘಟನೆಗಳು ನಡೆಯುತ್ತಿವೆ. ಇತ್ತೀಚೆಗೆ, ಮಸ್ತುಂಗ್ ಜಿಲ್ಲೆಯ ಅಲ್-ಫಲಾಹ್ ಮಸೀದಿ ಬಳಿ ಈದ್ ಮಿಲಾದ್-ಉಲ್-ನಬಿ ಮೆರವಣಿಗೆಯನ್ನು ಗುರಿಯಾಗಿಟ್ಟುಕೊಂಡು ಸ್ಫೋಟ ಸಂಭವಿಸಿದೆ. ಈ ದಾಳಿಯಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 30 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
#PakistanAt least four people were died and more than 50 others were wounded in an explosion near a masjid in#Mastungarea of#Balochistanduring the main procession of Eid Milad-ul-Nabi.pic.twitter.com/eipuYn4HVW
— Ghulam Abbas Shah (@ghulamabbasshah)September 29, 2023

ದಾಳಿ ನಡೆದ ಸ್ಥಳದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಸ್ಫೋಟದಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡ ಜನರನ್ನು ಕ್ವೆಟ್ಟಾಕ್ಕೆ ವರ್ಗಾಯಿಸಲಾಗುತ್ತಿದೆ ಮತ್ತು ಎಲ್ಲಾ ಆಸ್ಪತ್ರೆಗಳಲ್ಲಿ ರವಾನಿಸಲಾಗಿದೆ.
ಆತ್ಮಹತ್ಯಾ ಬಾಂಬರ್​ನಿಂದ ಈ ಸ್ಫೋಟ ಸಂಭವಿಸಿದೆ. ಸ್ಫೋಟದ ದೃಷ್ಟಿಯಿಂದ “ಸಂಪೂರ್ಣವಾಗಿ ಹೆಚ್ಚಿನ ಎಚ್ಚರಿಕೆಯಲ್ಲಿ” ಇರುವಂತೆ ಅದರ ಹೆಚ್ಚುವರಿ ಇನ್ಸ್‌ಪೆಕ್ಟರ್ ಜನರಲ್ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.  ಈದ್-ಐ-ಮಿಲಾದ್ ಮೆರವಣಿಗೆಗಳಿಗೆ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸುವ ನಿರೀಕ್ಷೆಯಿದೆ ಎಂದು ಕರಾಚಿ ಪೊಲೀಸರು ತಿಳಿಸಿದ್ದಾರೆ.
ಈ ತಿಂಗಳ ಆರಂಭದಲ್ಲಿ, ಅದೇ ಜಿಲ್ಲೆಯಲ್ಲಿ ನಡೆದ ಸ್ಫೋಟದಲ್ಲಿ ಜಮಿಯತ್ ಉಲೇಮಾ-ಎ-ಇಸ್ಲಾಂ-ಫಜಲ್ (ಜೆಯುಐ-ಎಫ್) ಮುಖಂಡ ಹಫೀಜ್ ಹಮ್ದುಲ್ಲಾ ಸೇರಿದಂತೆ ಕನಿಷ್ಠ 11 ಜನರು ಗಾಯಗೊಂಡಿದ್ದರು. ಕೆಲವು ವಾರಗಳ ಹಿಂದೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಗಳು ಲೆವಿ ಅಧಿಕಾರಿಯೊಬ್ಬರನ್ನು ಗುಂಡಿಕ್ಕಿ ಕೊಂದಿದ್ದರು.ಅದೇ ಸಮಯದಲ್ಲಿ ಆ ಮಾರ್ಗವಾಗಿ ಹೋಗುತ್ತಿದ್ದ ಇಬ್ಬರು ಗಾಯಗೊಂಡಿದ್ದರು.
ಪಾಕ್​​ ಕ್ರಿಕೆಟ್ ತಂಡ ಆಟಗಾರರಿಗೆ ಹೈದರಾಬಾದ್​​ನಲ್ಲಿ ತಯಾರಾಯ್ತು ವಿಶೇಷ ಫುಡ್​​ ಮೆನು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
