ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ 2018ರ ಸುಪ್ರೀಂ ಕೋರ್ಟ್​ ಆದೇಶದ ನಂತರ ಸಾಂಪ್ರದಾಯಿಕ ಪಟಾಕಿಗಳನ್ನು ನಿಷೇಧಿಸಲಾಗಿದೆ. ಸಾಕಷ್ಟು ಸಂಶೋಧನೆಗಳನ್ನು ಮಾಡಲಾಗಿದ್ದು, ಹಸಿರು ಪಟಾಕಿಗಳನ್ನು ಮಾತ್ರ ಅನುಮತಿಸಲಾಗಿದೆ. 2016ರಿಂದ ಪಟಾಕಿ ಮಾರಾಟಕ್ಕೆ ಯಾವುದೇ ಪರವಾನಗಿಯನ್ನೂ ನೀಡಲಾಗಿಲ್ಲ.
ಹಸಿರು ಪಟಾಕಿ ನಿಷೇಧಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರದ ಆದೇಶಕ್ಕೆ ಬೆಂಬಲ ನೀಡಿರುವ ಸುಪ್ರೀಂಕೋರ್ಟ್​ ಉತ್ಪಾದನೆ, ಮಾರಾಟಕ್ಕೆ ಅನುಮತಿ ಇಲ್ಲ ಎಂದು ಸ್ಪಷ್ಟಪಡಿಸಿದೆ. ಬೇರಿಯಂ ಬಳಸಿ ಪಟಾಕಿಗಳ ತಯಾರಿಕೆ ಮತ್ತು ಬಳಕೆಗೆ ಸಲ್ಲಿಸಿದ ಮನವಿಯನ್ನೂ ಸುಪ್ರೀಂ ತಿರಸ್ಕರಿಸಿದೆ.
ದೀಪಾವಳಿ ಹಾಗೂ ಇತರೆ ಹಬ್ಬಗಳಲ್ಲಿ ಪಟಾಕಿ ಹಚ್ಚೋಕೆ ಅವಕಾಶ ನೀಡಬೇಕೆ ಎಂಬುದರ ಕುರಿತು ಇಂದು ಸುಪ್ರೀಂಕೋರ್ಟ್​ ತೀರ್ಪು ಹೊರಬಿದ್ದಿದೆ. ಕಳೆದ ವಾರ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್​ ಸ್ಪಷ್ಟನೆ ನೀಡಿದ್ದು, ದೆಹಲಿಯಂತಹ ರಾಜ್ಯಗಳಲ್ಲಿ ಪಟಾಕಿ ಸಂಪೂರ್ಣ ನಿಷೇಧವಿರುವ ರಾಜ್ಯಗಳಲ್ಲಿ ಹಸಿರು ಪಟಾಕಿ ಸುಡುವುದಕ್ಕೂ ಅವಕಾಶವಿಲ್ಲ, ನ್ಯಾಯಾಲಯ ಯಾವುದೇ ರೀತಿಯಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದಿತ್ತು.
ಈ ಹಿಂದೆ ದೆಹಲಿಯಲ್ಲಿ ಪಟಾಕಿ ತಯಾರಿಕೆ, ಸಂಗ್ರಹ, ಮಾರಾಟ ಹಾಗೂ ಸಿಡಿಸುವಿಕೆಯ ಮೇಲೆ ಸಮಗ್ರ ನಿಷೇಧ ಹೇರಿರುವ ದೆಹಲಿ ಸರ್ಕಾರದ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್​ ನಿರಾಕರಿಸಿತ್ತು.
ಏನಿದು ಹಸಿರು ಪಟಾಕಿ..? ನಿಜಕ್ಕೂ ಇದು ಮಾಲಿನ್ಯ ರಹಿತವೇ?ಈಗಾಗಲೇ ದೆಹಲಿಯಲ್ಲಿ ಚಾಲ್ತಿಯಲ್ಲಿರುವ ಈ ಹಸಿರು ಪಟಾಕಿ ಬಳಕೆ ಬಗ್ಗೆ ಬಹುತೇಕರಿಗೆ ಅರಿವಿಲ್ಲ. ಅಲ್ಲದೇ ಈ ಹಸಿರು ಪಟಾಕಿ ಮಾರಾಟದ ಬಗ್ಗೆ ಈ ಹಿಂದೆಯೇ ವರ್ತಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಆದರೆ ಈ ಬಗ್ಗೆ ಗಮನ ಸೆಳೆಯುವಲ್ಲಿ ವಿಫಲರಾಗಿದ್ದರು. ಪಟಾಕಿಯಂತೆಯೇ ಕಾಣುವ ಇದು ಪರಿಸರ ಸ್ನೇಹಿಯಾಗಿದೆ.
ಹೆಚ್ಚು ಮಾಲಿನ್ಯವಲ್ಲದ ಈ ಪಟಾಕಿ ಕೇವಲ ಶೇ30ರಷ್ಟು ಪ್ರಮಾಣದ ಹೊಗೆಯನ್ನು ಹೊರಹಾಕುತ್ತದೆ. ಕೌನ್ಸಿಲ್​ ಆಫ್ ಸೈಂಟಿಫಿಕ್​ ಅಂಡ್​ ಇಂಡಸ್ಟ್ರಿಯಲ್​ ರಿಸರ್ಚ್​ (ಸಿಎಸ್​ಐಆರ್​) ಪ್ರಯೋಗಾಲಯದ ಮೂಲಕ ಇದನ್ನು ಅಭಿವೃದ್ಧಿ ಪಡಿಸಲಾಗಿದೆ. ಇನ್ನು ಕಳೆದ ವರ್ಷ ಈ ಪಟಾಕಿಯನ್ನು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ​ದೆಹಲಿಯಲ್ಲಿ ಬಿಡುಗಡೆ ಮಾಡಿದ್ದರು.
ಕಡಿಮೆ ಬೆಳಕು ಮತ್ತು ಶಬ್ದ ಹೊರಸೂಸುವ, ಸಿಡಿತದ ಬಳಿಕ ಕಡಿಮೆ ಪ್ರಮಾಣದ ನೈಟ್ರೋಜನ್ ಆಕ್ಸೈಡ್, ಸಲ್ಫರ್ ಡೈ ಆಕ್ಸೆಡ್ ಹೊರಚೆಲ್ಲುವ ಪಟಾಕಿಗಳನ್ನು ಹಸಿರು ಪಟಾಕಿ ಎಂದು ಪರಿಗಣಿಸಲಾಗುತ್ತದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − seven =
Remember me
