ಢಾಕಾ:2024ರ ಲೋಕಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಎನ್​ಡಿಎ, ಕೇಂದ್ರದಲ್ಲಿ ಮತ್ತೊಮ್ಮೆ ತನ್ನ ಸರ್ಕಾರ ರಚಿಸಲಿದ್ದು, ಪ್ರಧಾನಿ ನರೇಂದ್ರ ಮೋದಿಯವರೇ ಮುಂದಿನ ಪ್ರಧಾನಿಯಾಗಿ ಜೂ. 9ರಂದು ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಉತ್ತರ ಪ್ರದೇಶ: ವಿಪಕ್ಷ ನಾಯಕ ಸ್ಥಾನಕ್ಕೆ ಅಖಿಲೇಶ್ ಯಾದವ್ ರಾಜೀನಾಮೆ ಸಾಧ್ಯತೆ!
ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಭಾಗಿಯಾಗುವ ನಿರೀಕ್ಷೆಯಿದೆ ಎಂದು ಅವರ ಆಪ್ತರು ಗುರುವಾರ ತಿಳಿಸಿವೆ. ಹಸೀನಾ ಅವರು ಬುಧವಾರ ಮೋದಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದರು. ಈ ವೇಳೆ ಮೋದಿ ಅವರು ತಮ್ಮ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನಿಸಿದ್ದಾರೆ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ.
ಮೋದಿಯವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಹಸೀನಾ ಅವರು ಶುಕ್ರವಾರ ಸಂಜೆ 4ಕ್ಕೆ ಢಾಕಾದಿಂದ ನವದೆಹಲಿಗೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಕಾರ್ಯಕ್ರಮಕ್ಕೆ ಶ್ರೀಲಂಕಾದ ಅಧ್ಯಕ್ಷ ರಾನಿಲ್ ವಿಕ್ರಮಸಂಘೆ ಅವರು ಆಗಮಿಸಲಿದ್ದಾರೆ. ಅವರೊಂದಿಗೆ ನೇಪಾಳ ಪ್ರಧಾನಿ ಪುಷ್ಪ ಕುಮಾರ್ ದಹಾಲ್ ಮತ್ತು ಭೂತಾನ್​ ದೊರೆ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್​ಚುಕ್​ ಕೂಡ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾರಿಷಸ್​ ಪ್ರಧಾನಿ ಪ್ರವಿಂದ್​ ಜುಗ್ನಾಥ್​ ಅವರನ್ನೂ ಆಹ್ವಾನಿಸುವ ಸಾಧ್ಯತೆಯಿದೆ.
2024ರ ಲೋಕಸಭೆ ಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು, 2019ರಲ್ಲಿ 303 ಸ್ಥಾನಗಳನ್ನು ಪಡೆದಿದ್ದ ಬಿಜೆಪಿ ಈ ಬಾರಿ 240 ಸ್ಥಾನಗಳಿಗೆ ಇಳಿದಿದೆ. ಕಳೆದ ಬಾರಿ ಎನ್‌ಡಿಎ 352 ಸ್ಥಾನಗಳನ್ನು ಪಡೆದಿತ್ತು, ಆದರೆ ಈ ಬಾರಿ ಆ ಸಂಖ್ಯೆ 293ಕ್ಕೆ ಇಳಿದಿದೆ.
ಎಸ್​ಟಿ ನಿಗಮದ ಹಗರಣ: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
