ಚೆನ್ನೈ:ಬಾಂಗ್ಲಾದೇಶದಲ್ಲಿರುವ ಹಿಂದೂಗಳನ್ನು ರಕ್ಷಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಇಶಾ ಫೌಂಡೇಶನ್‌ನ ಸಂಸ್ಥಾಪಕ, ಆಧ್ಯಾತ್ಮಿಕ ಗುರುಗಳಾದ ಶ್ರೀ ಸದ್ಗುರು ಒತ್ತಾಯಿಸಿದರು.
ಇದನ್ನೂ ಓದಿ:ಭಾರತ ಎಂದಿಗೂ ಹಿಂದೂ ರಾಷ್ಟ್ರ ಆಗುವುದಿಲ್ಲ; ಖ್ಯಾತ ಜ್ಯೋತಿಷಿ ಹೇಳಿಕೆ ವೈರಲ್
ಬಾಂಗ್ಲಾದೇಶದ ಹಿಂಸಾತ್ಮಕ ಪರಿಸ್ಥಿತಿಗೆ ಸದ್ಗುರು ಅವರು ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿದ್ದಾರೆ. ಹಿಂದೂಗಳ ಮೇಲಿನ ದೌರ್ಜನ್ಯ ಬಾಂಗ್ಲಾದೇಶದ ಆಂತರಿಕ ವಿಷಯವಲ್ಲ. ನಮ್ಮ ನೆರೆಹೊರೆಯಲ್ಲಿರುವ ಅಲ್ಪಸಂಖ್ಯಾತರ ಸುರಕ್ಷತೆಗೆ ಸಾಧ್ಯವಾದಷ್ಟು ಬೇಗ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ಒತ್ತಾಯಿಸಿದರು.
The atrocities being perpetrated against Hindus is not just an internal matter of#Bangladesh. Bharat cannot be Maha-Bharat if we do not stand up and act at the earliest to ensure the safety of minorities in our neighborhood. What was part of this Nation unfortunately became…pic.twitter.com/3pen0ucDay
— Sadhguru (@SadhguruJV)August 7, 2024

ಬಾಂಗ್ಲಾದ ಹಿಂದೂಗಳ ಪರವಾಗಿ ನಿಲ್ಲದಿದ್ದರೆ ಭಾರತ ಎಂದಿಗೂ ಮಹಾಭಾರತವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ದುರದೃಷ್ಟವಶಾತ್ ಭಾರತದ ಭಾಗವಾಗಿದ್ದ ಪ್ರದೇಶವು ನೆರೆಯ ಪ್ರದೇಶವಾಗಿ ಮಾರ್ಪಟ್ಟಿದೆ. ಈ ದೌರ್ಜನ್ಯಗಳಿಂದ ನಮ್ಮ ಜನಾಂಗವನ್ನು ರಕ್ಷಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಜಗ್ಗಿ ವಾಸುದೇವನ್ ಸ್ಪಷ್ಟಪಡಿಸಿದ್ದಾರೆ.
ಬಾಂಗ್ಲಾದೇಶದ 27 ಜಿಲ್ಲೆಗಳಲ್ಲಿ ಹಿಂದೂ ನಿವಾಸಗಳು ಮತ್ತು ಅವರ ವ್ಯಾಪಾರ ಸಂಸ್ಥೆಗಳ ಮೇಲೆ ದಾಳಿಗಳು ಮತ್ತು ಲೂಟಿಗಳ ವರದಿಗಳಿವೆ. ಪ್ರಧಾನಿ ರಾಜೀನಾಮೆ ಬಳಿಕವೂ ಮೀಸಲಾತಿ ಹೋರಾಟ ಆಂದೋಲನ ನಡೆಸುತ್ತಿರುವವರು ಹಿಂದೂ ದೇವಾಲಯಗಳು ಮತ್ತು ಮನೆಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ಈ ಕುರಿತು ಸದ್ಗುರು ಪ್ರತಿಕ್ರಿಯಿಸಿದ್ದಾರೆ.
ಬಾಂಗ್ಲಾದಲ್ಲಿ ಮುಂದುವರಿದ ಸಾವಿನ ಸರಣಿ: ಶೇಖ್​ ಹಸೀನಾ ಪಕ್ಷದ 29 ನಾಯಕರ ಮೃತದೇಹಗಳು ಪತ್ತೆ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:15 − one =
Remember me
