ದಿಸ್ಪುರ್:ಬಾಂಗ್ಲಾದೇಶದಲ್ಲಿನ ಪ್ರಸ್ತುತ ಬಿಕ್ಕಟ್ಟಿನ ಪರಿಸ್ಥಿತಿಯಿಂದಾಗಿ ಹಿಂದುಗಳು ಭಾರತಕ್ಕೆ ಪ್ರವೇಶಿಸಲು ಪ್ರಯತ್ನಿಸಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ಶರ್ಮಾ ಶನಿವಾರ(ಆಗಸ್ಟ್​ 24) ಹೇಳಿದ್ದಾರೆ. ಅಲ್ಲದೆ ಬಾಂಗ್ಲಾದಲ್ಲಿ ನೆಲೆಸಿರುವ ಹಿಂದುಗಳು ಅಲ್ಲಿನ ಎಲ್ಲ ಪರಿಸ್ಥಿತಿಗಳ ವಿರುದ್ಧ ಹೋರಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನು  ಓದಿ:ಬಾಂಗ್ಲಾ ಮಾಜಿ ಪ್ರಧಾನಿ ರಾಜತಾಂತ್ರಿಕ ಪಾಸ್​ಪೋರ್ಟ್ ರದ್ದು; ​​​ಶೇಖ್​ ಹಸೀನಾ ಮುಂದಿನ ನಡೆ ಏನು?
ಹಿಂದುಗಳು ಬಾಂಗ್ಲಾದೇಶದಲ್ಲಿ ಉಳಿದುಕೊಂಡು ಹೋರಾಡುತ್ತಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಒಬ್ಬನೇ ಒಬ್ಬ ಹಿಂದು ವ್ಯಕ್ತಿಯೂ ಭಾರತಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತಿರುವುದು ಪತ್ತೆಯಾಗಿಲ್ಲ. ಆದರೆ ಮುಸ್ಲಿಮರು ಜವಳಿ ಕ್ಷೇತ್ರದಲ್ಲಿ ಉದ್ಯೋಗ ಪಡೆಯುವ ಸಲುವಾಗಿ ಭಾರತಕ್ಕೆ ಬರಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿದರು.
ಕಳೆದು ಒಂದು ತಿಂಗಳಲ್ಲಿ ಭಾರತಕ್ಕೆ ಅಕ್ರಮವಾಗಿ ನುಸುಳಲು ಪ್ರಯತ್ನಿಸಿದ 35 ಮುಸ್ಲಿಂ ನುಸುಳುಕೋರರನ್ನು ಬಂಧಿಸಲಾಗಿದೆ. ಆದರೆ ಮುಸ್ಲಿಮರು ಬರುತ್ತಿರುವುದ ಅಸ್ಸಾಂಗಲ್ಲ. ಜವಳಿ ಉದ್ಯಮದಲ್ಲಿ ಉದ್ಯೋಗ ಪಡೆಯುವ ಸಲುವಾಗಿ ಬೆಂಗಳೂರು, ತಮಿಳುನಾಡು, ಕೊಯಮತ್ತೂರಿಗೆ ಹೋಗುತ್ತಿದ್ದಾರೆ ಎಂದು ತಿಳಿಸಿದರು.
ಹಿಂದುಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದೇವೆ ಎಂದು ಹಿಮಂತ್​ ಶರ್ಮಾ ಹೇಳಿದರು. ಬಾಂಗ್ಲಾದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಪ್ರಧಾನಿ ಶೇಖ್​ ಹಸೀನಾ ಅವರು ದೇಶದಲ್ಲಿನ ಮೀಸಲಾತಿ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡ ಬಳಿಕ 2024 ಆಗಸ್ಟ್​​​ 5ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಪಲಾಯನ ಮಾಡಿದರು.(ಏಜೆನ್ಸೀಸ್​​)
ಪ್ರಭಾಸ್​ ಮೇಲಿನ ಜೋಕರ್ ಕಾಮೆಂಟ್​​​; ಅರ್ಷದ್​ಗೆ ಆಟಿಕೆ ಕಳುಹಿಸುವುದಾಗಿ ನಾಗ್​​ಅಶ್ವಿನ್ ಹೇಳಿದ್ದೇಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 10 =
Remember me
