ಭುವನೇಶ್ವರ:ಒಡಿಶಾದ 64 ವರ್ಷದ ಬ್ಯಾಂಕ್ ನಿವೃತ್ತ ಅಧಿಕಾರಿ ಜೈ ಕಿಶೋರ್ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಪಾಸ್ ಮಾಡಿ, ಬುರ್ಲಾದ ವೀರ್ ಸುರೇಂದ್ರ ಸಾಯಿ ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ಪ್ರಥಮ ವರ್ಷದ ಎಂಬಿಬಿಎಸ್​ಗೆ ಪ್ರವೇಶ ಪಡೆದಿದ್ದಾರೆ.
ಎಸ್​ಬಿಐನ ಮಾಜಿ ಅಧಿಕಾರಿಯಾಗಿದ್ದ ಜೈ ಕಿಶೋರ್ ಅಂಗವಿಕಲರಾಗಿದ್ದು, ಮೀಸಲಾತಿ ವಿಭಾಗದಲ್ಲಿ ಎಂಬಿಬಿಎಸ್​ಗೆ ಪ್ರವೇಶ ಪಡೆದಿದ್ದಾರೆ. 2018ರಲ್ಲಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ವೇಳೆ, 25 ವರ್ಷ ಮೇಲ್ಪಟ್ಟವರಿಗೂ ನೀಟ್​ನಲ್ಲಿ ಅವಕಾಶ ನೀಡಬೇಕು ಎಂದು ಸುಪ್ರೀಕೋರ್ಟ್ ಹೇಳಿತ್ತು. ಇದು ಜೈಕಿಶೋರ್​ಗೆ ವರದಾನವಾಯಿತು.
ಕೋರ್ಸ್ ಪೂರ್ಣಗೊಳಿಸುವ ವೇಳೆಗೆ ಜೈ ಕಿಶೋರ್​ಗೆ 70 ವರ್ಷ ದಾಟಲಿದೆ. ವಯಸ್ಸು ಕೇವಲ ಸಂಖ್ಯೆ ಮಾತ್ರ, ಸೇವೆಗೆ ಅದು ಅಡ್ಡಿಯಾಗುವುದಿಲ್ಲ. ಜೀವಂತವಾಗಿರುವವರೆಗೂ ಜನರಿಗೆ ಸೇವೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ. ಜೈ ಕಿಶೋರ್ ಅವರ ಅವಳಿ ಮಕ್ಕಳಲ್ಲಿ ಒಬ್ಬ ಮಗಳು ಇತ್ತೀಚೆಗೆ ಸಾವನ್ನಪ್ಪಿದ್ದರು. ಈ ಘಟನೆ ಅವರನ್ನು ಎಂಬಿಬಿಎಸ್ ಹಾದಿಗೆ ಪ್ರೇರೇಪಿಸಿತು ಎಂದು ತಿಳಿದುಬಂದಿದೆ.
ರಾಜಕೀಯ ತುಂಬಾ ಕಷ್ಟ… ಎಂದ ಅಣ್ಣಾಮಲೈ!

ಬೈಕ್​ನಲ್ಲಿ ಕುಳಿತು ನಿದ್ರೆಗೆ ಜಾರಿದ ತಾಯಿ-ಮಕ್ಕಳು ತರಗೆಲೆಯಂತೆ ರಸ್ತೆಗೆ ಉರುಳಿದರು! ಬೆಚ್ಚಿಬೀಳಿಸುತ್ತೆ ಈ ದೃಶ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + sixteen =
Remember me
