ನವದೆಹಲಿ:ಪ್ರಸಕ್ತ ಹಣಕಾಸು ವರ್ಷ ಮಾರ್ಚ್ 31ಕ್ಕೆ ಕೊನೆಗೊಳ್ಳುತ್ತಿದೆ. ಹೊಸ ಹಣಕಾಸು ವರ್ಷದ ಮೊದಲ ತಿಂಗಳಿನಲ್ಲಿಯೇ ಬ್ಯಾಂಕ್​ಗಳಿಗೆ ಸಾಲು ಸಾಲು ರಜೆಗಳು ಎದುರಾಗಿವೆ. ಹಬ್ಬಗಳು ಮತ್ತು ವಾರಾಂತ್ಯದ ರಜೆಗಳನ್ನು ಲೆಕ್ಕಹಾಕಿದರೆ ಒಟ್ಟು 15 ದಿನಗಳ ಕಾಲ ಬ್ಯಾಂಕ್​ಗಳು ಕಾರ್ಯನಿರ್ವಹಿಸುವುದಿಲ್ಲ.ಹಾಗೆಯೇ ದೇಶದಾದ್ಯಂತ ಪ್ರತಿ ತಿಂಗಳು ಎರಡನೇ ಹಾಗೂ ನಾಲ್ಕನೇ ಶನಿವಾರ ಬ್ಯಾಂಕ್ ರಜೆ ಇರಲಿದೆ.ಇದನ್ನೂ ಓದಿ:ಪಂಚಮಸಾಲಿ ಮೀಸಲಾತಿ ಹೋರಾಟ ಸ್ಥಗಿತ; ವಿಜಯಾನಂದ ಕಾಶಪ್ಪನವರ್ ರಾಜೀನಾಮೆ
ತಿಂಗಳ ಎರಡು ಮತ್ತು ನಾಲ್ಕನೇ ಶನಿವಾರ ಬ್ಯಾಂಕ್​ಗಳು ತೆರೆದಿರುವುದಿಲ್ಲ. ತಿಂಗಳ ಪ್ರತಿ ಆದಿತ್ಯವಾರ ಬ್ಯಾಂಕ್​ಗಳಿಗೆ ರಜೆ ಇರುತ್ತವೆ. ಇವುಗಳ ಹೊರತಾಗಿ ರಾಷ್ಟ್ರೀಯ ಹಬ್ಬ ಹಾಗೂ ಪ್ರಾದೇಶಿಕವಾಗಿ ಆಚರಣೆಗೊಳ್ಳುವ ಹಬ್ಬದಂದು ಬ್ಯಾಂಕ್​ಗಳು ಗ್ರಾಹಕರ ಸೇವೆಗೆ ಲಭ್ಯವಿರುವುದಿಲ್ಲ.
ಇದೀಗ ಏಪ್ರಿಲ್ ತಿಂಗಳಿನಲ್ಲಿ ಬ್ಯಾಂಕ್​ಗಳಿಗೆ ಸಾಲು ಸಾಲು ರಜೆಗಳು ಎದುರಾಗಿದ್ದು, ಗ್ರಾಹಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಏಪ್ರಿಲ್ 1,2,4,5,7,8,9,14,15,16,18,21,22,23 ಮತ್ತು 30 ರಂದು ಬ್ಯಾಂಕ್​ಗಳು ರಜೆ ಇರುತ್ತವೆ. ಒಟ್ಟಾರೆ 15 ದಿನಗಳ ರಜೆಯ ಸಮಯದಲ್ಲಿ ಎಟಿಎಂ, ನಗದು ಠೇವಣಿ, ಆನ್​ಲೈನ್ ಬ್ಯಾಂಕಿಂಗ್ ಮತ್ತು ಮೊಬೈಲ್ ಬ್ಯಾಂಕಿಗ್ ಸೇವೆಗಳು ಗ್ರಾಹಕರಿಗೆ ಲಭ್ಯವಾಗುತ್ತಿವೆ.ಇದನ್ನೂ ಓದಿ:ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ವಿರಾಮ; ಹೋರಾಟ ಸ್ಥಗಿತಗೊಳಿಸಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + sixteen =
Remember me
