ನವದೆಹಲಿ:ನಿಷೇಧಿತ ಸಿಮಿ ಭಯೋತ್ಪಾದಕ ಸಂಘಟನೆಯ ಕಾರ್ಯಕರ್ತ, ಶಿಕ್ಷಕನ ವೇಷದಲ್ಲಿ ತಲೆ ಮರೆಸಿಕೊಂಡಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ಹನೀಫ್‌ ಬಂಧಿತ. 22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಾಗೂ ಕರ್ನಾಟಕದಲ್ಲೂ ಹಲವು ಸಭೆಗಳನ್ನು ನಡೆಸಿದ್ದ ನಿಷೇಧಿತ ಸಿಮಿ ಭಯೋತ್ಪಾದಕ ಸಂಘಟನೆಯ ಕಾರ್ಯಕರ್ತ ಹನೀಫ್‌ ಶೇಖ್‌ ಎಂಬಾತನನ್ನು ದೆಹಲಿ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ಈತ ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಸಿಮಿ ಸಂಘಟನೆಗಾಗಿ ಸಭೆಗಳನ್ನು ಆಯೋಜಿಸಿದ್ದ. ಸದ್ಯ ತನ್ನ ಹೆಸರನ್ನು ಮೊಹಮ್ಮದ್‌ ಹನೀಫ್‌ ಎಂದು ಬದಲಿಸಿಕೊಂಡು ರಹಸ್ಯ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದ. ಭುಸಾವಲ್‌ನ ಸರ್ಕಾರಿ ಉರ್ದು ಶಾಲೆಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ದೆಹಲಿ ಹಾಗೂ ಕೇರಳದಲ್ಲಿ ಈತ ಹಲವು ಸಭೆಗಳನ್ನು ಆಯೋಜಿಸಿ ಮುಸ್ಲಿಂ ಯುವಕರನ್ನು ಭಯೋತ್ಪಾದನೆಗೆ ಪ್ರಚೋದಿಸುತ್ತಿದ್ದ. 2001ರಲ್ಲಿ ಈತನ ಮೇಲೆ ಯುಎಪಿಎ ಕಾಯ್ದೆಯಡಿ ದೇಶದ್ರೋಹದ ಕೇಸು ದಾಖಲಿಸಲಾಗಿತ್ತು. 2002ರಲ್ಲಿ ದೆಹಲಿ ಕೋರ್ಟ್‌ ಈತನನ್ನು ದೇಶಭ್ರಷ್ಟ ಭಯೋತ್ಪಾದಕನೆಂದು ಘೋಷಿಸಿತ್ತು. ಅಲ್ಲಿಂದ ಈವರೆಗೆ ದೆಹಲಿ ಪೊಲೀಸರು ಈತನಿಗಾಗಿ ಎಲ್ಲೆಡೆ ಶೋಧ ನಡೆಸಿದ್ದರು. ಬರೋಬ್ಬರಿ 22 ವರ್ಷಗಳ ಬಳಿಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
