ನವದೆಹಲಿ:ಅಕ್ಟೋಬರ್ 5ರಿಂದ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಗೆ 15 ಸದಸ್ಯರ ಆತಿಥೇಯ ಭಾರತ ತಂಡವನ್ನು ಬಿಸಿಸಿಐ ಮಂಗಳವಾರ (ಸೆ.05) ಪ್ರಕಟಿಸಿದೆ.
ಮಧ್ಯಾಹ್ನ 1.30ಕ್ಕೆ ನಡೆದ ಸುದ್ದಿಗೋಷ್ಠಿಯಲ್ಲಿ ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್ ಅಗರ್ಕರ್ ಅವರು ತಂಡದ ಆಟಗಾರರ ಹೆಸರನ್ನು ಪ್ರಕಟಿಸಿದರು.
ಇದನ್ನೂ ಓದಿ:ದೇಶದ ಹೆಸರು ಬದಲಿಸಲು ಮುಂದಾಯ್ತಾ ಕೇಂದ್ರ ಸರ್ಕಾರ? ಚರ್ಚೆ ಹುಟ್ಟು ಹಾಕಿದ ರಾಷ್ಟ್ರಪತಿ ಭವನದ ಆಹ್ವಾನ ಪತ್ರಿಕೆ
ರೋಹಿತ್ ಶರ್ಮ ನೇತೃತ್ವದ ತಂಡಕ್ಕೆ ಹಾರ್ದಿಕ್ ಪಾಂಡ್ಯ ಉಪನಾಯಕನಾಗಿದ್ದು, ಜಸ್​ಪ್ರೀತ್​ ಬುಮ್ರಾ ಮತ್ತು ಕೆ.ಎಲ್. ರಾಹುಲ್ ಕೂಡ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರಲ್ಲದೆ, ಸೂರ್ಯಕುಮಾರ್ ಯಾದವ್ ಕೂಡ ಸ್ಥಾನ ಪಡೆದಿದ್ದಾರೆ. ಆದರೆ, ಸಂಜು ಸ್ಯಾಮ್ಸನ್, ಯುಜ್ವೇಂದ್ರ ಚಹಾಲ್ ಮತ್ತು ತಿಲಕ್ ವರ್ಮಾ ಅವರನ್ನು ತಂಡದಿಂದ ಹೊರಗಿಡಲಾಗಿದೆ. ಅಲ್ಲದೆ, ಸ್ಟಾರ್​ ಆಟಗಾರರಾದ ಶಿಖರ್​ ಧವನ್​ ಹಾಗೂ ರವಿಚಂದ್ರನ್​ ಅಶ್ವಿನ್​ ಅವರನ್ನು ತಂಡದಿಂದ ಕೈಬಿಡಲಾಗಿದೆ.
ಆಯ್ಕೆಯಾದ ಆಟಗಾರ ಸಂಪೂರ್ಣ ಪಟ್ಟಿ ಈ ಕೆಳಕಂಡಂತಿದೆ.
ರೋಹಿತ್​ ಶರ್ಮಾ (ನಾಯಕ), ಹಾರ್ದಿಕ್​ ಪಾಂಡ್ಯ (ಉಪನಾಯಕ), ಶುಭಮನ್​ ಗಿಲ್​, ವಿರಾಟ್​ ಕೊಹ್ಲಿ, ಶ್ರೇಯಸ್​ ಅಯ್ಯರ್​, ಕೆ.ಎಲ್​. ರಾಹುಲ್​, ರವೀಂದ್ರ ಜಡೇಜಾ, ಶಾರ್ದುಲ್​ ಠಾಕೂರ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್​, ಕುಲದೀಪ್​ ಯಾದವ್​, ಮೊಹಮ್ಮದ್​ ಶಮಿ, ಅಕ್ಷರ್​ ಪಟೇಲ್​, ಇಶಾನ್​ ಕಿಶಾನ್​ ಮತ್ತು ಸೂರ್ಯಕುಮಾರ್​ ಯಾದವ್​.
BCCI Chief Selector Ajit Agarkar announces ICC World Cup 2023 squad- Rohit Sharma (captain), Hardik Pandya (vice-captain), Shubman Gill, Virat Kohli, Shreyas Iyer, KL Rahul, Ravindra Jadeja, Shardul Thakur, Jasprit Bumrah, Mohammed Siraj, Kuldeep Yadav, Mohammed Shami, Axar…pic.twitter.com/ebzUbiPkV0
— ANI (@ANI)September 5, 2023

ಅಕ್ಟೋಬರ್​ 5ರಿಂದ ಟೂರ್ನಿ ಆರಂಭವಾಗಲಿದ್ದು, ಮೊದಲ ಪಂದ್ಯ ಗುಜರಾತಿನ ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. 2019ರ ಫೈನಲಿಸ್ಟ್​ಗಳಾದ ಇಂಗ್ಲೆಂಡ್​ ಮತ್ತು ನ್ಯೂಜಿಲೆಂಡ್​ ತಂಡ ಮೊದಲ ಪಂದ್ಯದಲ್ಲಿ ಮುಖಾಮುಖಿಯಾಲಿವೆ. ನವೆಂಬರ್​ 19ರಂದು ಫೈನಲ್​ ಪಂದ್ಯ ಇದೇ ಮೈದಾನದಲ್ಲಿ ನಡೆಯಲಿದೆ.(ಏಜೆನ್ಸೀಸ್​​)
ರಶ್ಮಿಕಾ ಧರಿಸಿರುವ ಸೀರೆ ನೋಡಲು ಸಿಂಪಲ್..ಆದರೆ ಸಖತ್​ ದುಬಾರಿ!

ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಇನ್ಮುಂದೆ 2 ಬಾರಿ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ, ಶಿಕ್ಷಣ ಸಚಿವರಿಂದ ಘೋಷಣೆ

ಕರಿಕಾನು ಗುಡ್ಡದ ಮೇಲೆ ಪ್ರಮೋದ್; ಹುಟ್ಟುಹಬ್ಬಕ್ಕೆ ಚಿತ್ರತಂಡದ ಪೋಸ್ಟರ್ ಉಡುಗೊರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + one =
Remember me
