ನವದೆಹಲಿ:ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಬಾಲರಾಮ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ತೆರಳಲು ಟೀಮ್​ ಇಂಡಿಯಾದ ಸ್ಟಾರ್​ ಬ್ಯಾಟರ್​ ವಿರಾಟ್​ ಕೊಹ್ಲಿ ಅವರಿಗೆ ಭಾರತೀಯ ಕ್ರಿಕೆಟ್​ ನಿಯಂತ್ರಣ ಮಂಡಳಿ (ಬಿಸಿಸಿಐ) ಅನುಮತಿ ನೀಡಿರುವುದಾಗಿ ಬುಧವಾರ (ಜ.17) ವರದಿಯಾಗಿದೆ.
ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಆಗಮಿಸುವಂತೆ ಕೊಹ್ಲಿ ಮತ್ತು ಅವರ ಧರ್ಮಪತ್ನಿ ಹಾಗೂ ಬಾಲಿವುಡ್​ ನಟಿ ಅನುಷ್ಕಾ ಶರ್ಮಾರಿಗೆ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಸಮಿತಿ ಸದಸ್ಯರು ಮುಂಬೈನಲ್ಲಿರುವ ನಿವಾಸಕ್ಕೆ ತೆರಳಿ ಆಹ್ವಾನ ಪತ್ರಿಕೆಯನ್ನು ನೀಡಿದ್ದಾರೆ. ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡೂಲ್ಕರ್​, ಎಂ.ಎಸ್​. ಧೋನಿ, ಹರ್ಭಜನ್​ ಸಿಂಗ್, ರೋಹಿತ್​ ಶರ್ಮ​ ಮತ್ತು ಗೌತಮ್​ ಗಂಭೀರ್​ಗೂ ಸಹ ಆಹ್ವಾನ ಪತ್ರಿಕೆ ನೀಡಲಾಗಿದೆ. ಅಲ್ಲದೆ, ಪಿ.ವಿ. ಸಿಂಧು ಮತ್ತು ನೀರಜ್​ ಚೋಪ್ರಾ ಸಹ ಆಗಮಿಸಲಿದ್ದು, ಜನವರಿ 22ರಂದು ರಾಮ ಜನ್ಮಭೂಮಿಯಲ್ಲಿ ಎಲ್ಲರು ರಾಮನ ಆಶೀರ್ವಾದಕ್ಕೆ ಪಾತ್ರರಾಗಲಿದ್ದಾರೆ.
ಕ್ರಿಕ್‌ಬಜ್ ವರದಿಯ ಪ್ರಕಾರ, ವಿರಾಟ್ ಕೊಹ್ಲಿ ಅವರು ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲು ನಿಗದಿತ ಶಿಬಿರದಿಂದ ಒಂದು ದಿನದ ರಜೆ ತೆಗೆದುಕೊಳ್ಳಲು ಬಿಸಿಸಿಐನಿಂದ ಅನುಮತಿ ಸಿಕ್ಕಿದೆ.
BCCI grants permission to Virat Kohli for attending Ram Mandir consecration ceremonypic.twitter.com/LggVxaBUIw
— Sanjay Kishore (@saintkishore)January 16, 2024

ಮಂದಿರದ ವೈಶಿಷ್ಟ್ಯಗಳು:ರಾಮ ಮಂದಿರ ಉದ್ಘಾಟನೆ ದಿನಾಂಕ ಹತ್ತಿರ ವಾಗುತ್ತಿದ್ದಂತೆ, ದೇವಾಲಯದ ಕುರಿತ ಹಲವು ಮಾಹಿತಿಗಳನ್ನು ಟ್ರಸ್ಟ್ ಹಂಚಿಕೊಂಡಿದೆ.
* ಸಾಂಪ್ರದಾಯಿಕ ನಾಗರ ಶೈಲಿಯಲ್ಲಿ ನಿರ್ಮಾಣ* 380 ಅಡಿ ಉದ್ದ (ಪೂರ್ವ-ಪಶ್ಚಿಮ), 250 ಅಡಿ ಅಗಲ ಮತ್ತು 161 ಅಡಿ ಎತ್ತರವನ್ನು ಹೊಂದಿದೆ.* ಮೂರು ಅಂತಸ್ತಿನದ್ದಾಗಿದ್ದು, ಪ್ರತಿ ಮಹಡಿಯು 20 ಅಡಿ ಎತ್ತರವಿದೆ. ಇದು ಒಟ್ಟು 392 ಕಂಬಗಳು ಮತ್ತು 44 ಬಾಗಿಲುಗಳನ್ನು ಹೊಂದಿದೆ.* ಮುಖ್ಯ ಗರ್ಭಗುಡಿಯಲ್ಲಿ ಭಗವಾನ್ ಶ್ರೀರಾಮನ ಬಾಲ್ಯದ ರೂಪ (ಬಾಲರಾಮ) ವಿಗ್ರಹ, ಮೊದಲ ಮಹಡಿಯಲ್ಲಿ ಶ್ರೀರಾಮ ದರ್ಬಾರ್ ಇರುತ್ತದೆ.* ನೃತ್ಯ ಮಂಟಪ, ರಂಗ ಮಂಟಪ, ಸಭಾ ಮಂಟಪ, ಪ್ರಾರ್ಥನೆ ಮತ್ತು ಕೀರ್ತನ ಮಂಟಪ ಎಂಬ ಐದು ಮಂಟಪಗಳು (ಹಾಲ್) ಇವೆ.* ದೇವತೆಗಳು, ದೇವರು ಮತ್ತು ದೇವತೆಗಳ ಪ್ರತಿಮೆಗಳನ್ನು ಕಂಬ ಮತ್ತು ಗೋಡೆಗಳ ಮೇಲೆ ಕೆತ್ತಲಾಗಿದೆ.* ಪೂರ್ವದಿಂದ ಸಿಂಹದ್ವಾರದ ಮೂಲಕ ಮಂದಿರಕ್ಕೆ ಪ್ರವೇಶ. 32 ಮೆಟ್ಟಿಲುಗಳು ಇರಲಿವೆ.* ಅಂಗವಿಕಲರು ಮತ್ತು ವೃದ್ಧರ ಅನುಕೂಲಕ್ಕಾಗಿ ಇಳಿಜಾರು ಮತ್ತು ಲಿಫ್ಟ್ ಇವೆ.* ಆವರಣದ ನಾಲ್ಕು ಮೂಲೆಗಳಲ್ಲಿ ಸೂರ್ಯ ದೇವ, ದೇವಿ ಭಗವತಿ, ಗಣೇಶ ಮತ್ತು ಶಿವನ ಮಂದಿರ ಇದೆ.* ಉತ್ತರದಲ್ಲಿ ಅನ್ನಪೂರ್ಣ ಮಂದಿರ, ದಕ್ಷಿಣದಲ್ಲಿ ಹನುಮಂತನ ಮಂದಿರವಿದೆ.* ಮಂದಿರ ನಿರ್ಮಾಣ ವೇಳೆ ಎಲ್ಲಿಯೂ ಕಬ್ಬಿಣ ಬಳಸುವುದಿಲ್ಲ* ಅಗ್ನಿ ಸುರಕ್ಷತೆಗಾಗಿ ನೀರು ಸರಬರಾಜು ಮತ್ತು ಸ್ವತಂತ್ರ ವಿದ್ಯುತ್ ಕೇಂದ್ರವನ್ನು ಹೊಂದಿದೆ.* ಯಾತ್ರಾರ್ಥಿಗಳಿಗೆ ವೈದ್ಯಕೀಯ ಸೌಲಭ್ಯಗಳು, ಲಾಕರ್ ಸೌಲಭ್ಯ ಇದೆ* ಸ್ನಾನದ ಪ್ರದೇಶ, ವಾಶ್​ರೂಮ್ಳು, ವಾಶ್​ಬಾಸಿನ್, ತೆರೆದ ಟ್ಯಾಪ್​ಗಳು ಇತ್ಯಾದಿಗಳೊಂದಿಗೆ ಪ್ರತ್ಯೇಕ ಬ್ಲಾಕ್ ನಿರ್ಮಾಣ
ಅಯೋಧ್ಯೆ ರಾಮಮಂದಿರದ ಹೈಟೆಕ್​ ಸೆಕ್ಯುರಿಟಿಗೆ ಖರ್ಚಾಗಿರುವ ಮೊತ್ತ ಕೇಳಿದ್ರೆ ಬೆರಗಾಗ್ತೀರಾ!

ಬೇರೆಯಾಗ್ತಿದ್ದಾರಾ ಹೇಮಾ ಮಾಲಿನಿ ಪುತ್ರಿ ಇಶಾ ಮತ್ತು ಭರತ್; ಇವರು ದೂರವಾಗುತ್ತಿರುವುದಕ್ಕೆ ಬೆಂಗಳೂರಿನಲ್ಲಿರುವ ಗರ್ಲ್ ಫ್ರೆಂಡ್ ಕಾರಣಾನಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + eleven =
Remember me
