ಪಶ್ಚಿಮ ಬಂಗಾಳ:ಭಾರತದಲ್ಲಿ ಪೌರತ್ವದ ಬಗ್ಗೆ ನಿರ್ಧಾರಗಳನ್ನು ಮಾಡುವ ಹಕ್ಕನ್ನು ಸಂವಿಧಾನವು ಕೇಂದ್ರ ಸರ್ಕಾರಕ್ಕೆ ನೀಡಿರುವುದರಿಂದ ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಗೂ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಗೆ ಬರಲಿದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಮಂಗಳವಾರ (ಆಗಸ್ಟ್​ 16) ಹೇಳಿದ್ದಾರೆ.
ಇದನ್ನೂ ಓದಿ:ಹೇಗಿದೆ ನೋಡಿ ಪೂಜಾ ಗಾಂಧಿ ಕೈಬರಹ!; ಕನ್ನಡದಲ್ಲೇ ಬರೆದು ಶುಭಾಶಯ ಕೋರಿದ ‘ಮುಂಗಾರು ಮಳೆ’ ಬೆಡಗಿ
ತೃಣಮೂಲ ಕಾಂಗ್ರೆಸ್ (TMC) ವಿರುದ್ಧ ವ್ಯಂಗ್ಯವಾಡಿದ ಮಜುಂದಾರ್, “ಅವರು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಬಹುದು. ಆದ್ರೆ, ಅದು ಉತ್ತಮ ಫಲಿತಾಂಶಗಳನ್ನು ನೀಡುವುದಿಲ್ಲ. ಟಿಎಂಸಿ ಸಿಎಎ ಅನುಷ್ಠಾನಕ್ಕೆ ಒಲವು ತೋರದಿರಬಹುದು. 2024ರ ಲೋಕಸಭಾ ಚುನಾವಣೆಯ ಮೊದಲು ಪೌರತ್ವ ಕಾಯ್ದೆ ತಿದ್ದುಪಡಿಯನ್ನು ಜಾರಿಗೆ ತರಲಾಗುವುದು” ಎಂದು ಹೇಳಿದರು.
ಇದನ್ನೂ ಓದಿ:S.S. ಮಲ್ಲಿಕಾರ್ಜುನ ಆಕ್ಷೇಪಾರ್ಹ ಪದ ಬಳಕೆ: ಶಾಮನೂರು ಶಿವಶಂಕರಪ್ಪ ಹೇಳಿದ್ದೇನು?
ಪೌರತ್ವವನ್ನು ನೀಡುವುದು ಕೇಂದ್ರ ಸರ್ಕಾರದ ವಿಶೇಷತೆ ಮತ್ತು ಸಂವಿಧಾನದ ಪ್ರಕಾರ ನಿರ್ದಿಷ್ಟ ರಾಜ್ಯಗಳದ್ದಲ್ಲ ಎಂದು ಮಜುಂದಾರ್ ಒತ್ತಿ ಹೇಳಿದರು. ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಯಾರು ಭಾರತೀಯ ಪೌರತ್ವ ಪಡೆಯುತ್ತಾರೆ ಅಥವಾ ಪಡೆಯುವುದಿಲ್ಲ ಎಂಬುದನ್ನು ಅವರು ನಿರ್ಧರಿಸಲು ಸಾಧ್ಯವಿಲ್ಲ. 2024ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಪಶ್ಚಿಮ ಬಂಗಾಳದಲ್ಲಿ ವಾಸಿಸುವ ಬಾಂಗ್ಲಾದೇಶಿ ಹಿಂದೂಗಳಿಗೆ ಪೌರತ್ವವನ್ನು ನೀಡುವ ಗುರಿಯನ್ನು ಕೇಂದ್ರ ಹೊಂದಿದೆ. ಅವರಿಗೆಲ್ಲಾ ಸೂಕ್ತ ಸೌಕರ್ಯ ಕಲ್ಪಿಸಲಾಗುವುದು” ಎಂದು ಹೇಳಿದರು,(ಏಜೆನ್ಸೀಸ್).
ಕಾವಾಲಯ್ಯ ಫೀವರ್: ಭರ್ಜರಿ ಸ್ಟೆಪ್ಸ್‌ ಹಾಕಿದ ಜಪಾನ್ ರಾಯಭಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
