ಕಲ್ಕತ್ತಾ:ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಪಶ್ಚಿಮ ಬಂಗಾಳ ಪೊಲೀಸರು ಬಿಜೆಪಿ ನಾಯಕ ಸಬ್ಯಸಾಚಿ ಘೋಷ್​ನನ್ನು ವಶಕ್ಕೆ ಪಡೆದಿದ್ದಾರೆ. ಸಂದೇಶ್​ಖಾಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಟಿಎಂಸಿ ನಡುವಿನ ಜಟಾಪಟಿ ನಡುವೆಯೇ ಈ ಬೆಳವಣಿಗೆ ನಡೆದಿರುವುದು ವಿಪಕ್ಷಕ್ಕೆ ಭಾರೀ ಮುಜುಗರವನ್ನುಂಟು ಮಾಡಿದೆ.
ಹೌರಾದ ಲಾಡ್ಜ್​​ ಒಂದರಲ್ಲಿ ಸಬ್ಯಸಾಚಿ ಘೋಷ್​ ವೇಶ್ಯಾವಾಟಿಕೆ ನಡೆಸುತ್6ತಿದ್ದರು ಎಂಬ ಆರೋಪ ಕೇಳಿ ಬಂದಿದ್ದು, ಬಿಜೆಪಿ ಪಿಂಪ್‌ಗಳನ್ನು ರಕ್ಷಿಸುತ್ತಿದೆ ಎಂದು ಟಿಎಂಸಿ ಆರೋಪಿಸಿ ಕಿಡಿಕಾರಿದೆ.
.@BJP4Bengalleader Sabyasachi Ghosh caught running a PROSTITUTION RACKET of MINOR GIRLS in his hotel in Howrah's Sankrail.The Police arrested 11 accused & rescued 6 victims from the spot.THIS IS BJP. They don't protect BETIS, they protect PIMPS!https://t.co/IUxN8iUH7y
ಇದನ್ನೂ ಓದಿ:ದೆಹಲಿ ಚಲೋ ಪ್ರತಿಭಟನೆ; ಮೃತ ರೈತನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ, ಕುಟುಂಬದವರಿಗೆ ಸರ್ಕಾರಿ ಉದ್ಯೋಗ: ಪಂಜಾಬ್ ಸಿಎಂ
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಟಿಎಂಸಿ, ಬಿಜೆಪಿ ನಾಯಕ ಸಬ್ಯಸಾಚಿ ಹೌರಾದ ಸಂಕ್ರೈಲ್‌ನಲ್ಲಿರುವ ತಮ್ಮ ಹೋಟೆಲ್‌ನಲ್ಲಿ ಅಪ್ರಾಪ್ತ ವಯಸ್ಕರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವುದು ಪೊಲೀಸ್​ ದಾಳಿಯಿಂದ ಬೆಳೆಕಿಗೆ ಬಂದಿದೆ. ಆರು ಮಂದಿ ಸಂತ್ರಸ್ತರನ್ನು ರಕ್ಷಿಸಲಾಗಿದ್ದು, 11 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಇದನ್ನು ಗಮನಿಸಿದರೆ ಬಿಜೆಪಿ ಬೇಟಿಗಳ ಬದಲಾಗಿ ಪಿಂಪ್​ಗಳ ರಕ್ಷಣೆಗೆ ನಿಂತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಕಿಡಿಕಾರಿದೆ.
ಸಂದೇಶ್​​ಖಾಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತರೂಢ ಟಿಎಂಸಿ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದು ವಿಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿ ಆರೋಪವನ್ನು ಹೇಗೆ ನಿಭಾಯಿಸಲಿದೆ ಎಂದು ಕಾದು ನೋಡಬೇಕಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
