ಕೊಲ್ಕತಾ :ನಿನ್ನೆ ಇನ್ನೂ ಚುನಾವಣಾ ಆಯೋಗವು ಕರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಉಲ್ಲಂಘಿಸಿ ಪ್ರಚಾರ ಕಾರ್ಯ ಕೈಗೊಳ್ಳದಂತೆ ರಾಜಕೀಯ ನಾಯಕರು ಮತ್ತು ಅಭ್ಯರ್ಥಿಗಳಿಗೆ ಎಚ್ಚರಿಕೆ ನೀಡಿದೆ. ಆದರೆ ವಿಧಾನಸಭಾ ಚುನಾವಣೆಯ ಬಿಸಿ ಏರಿರುವ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಪಕ್ಷಗಳು ತಮ್ಮ ಪ್ರಚಾರ ಕಾರ್ಯವನ್ನು ಅಳುಕದೆ ಮುಂದುವರಿಸಿಕೊಂಡು ಹೋಗುತ್ತಿವೆ.
ಖುದ್ದು ಕೇಂದ್ರ ಗೃಹ ಸಚಿವರಾದ ಬಿಜೆಪಿ ನಾಯಕ ಅಮಿತ್​ ಷಾ ಅವರು ನಾಡಿಯ ಜಿಲ್ಲೆಯ ಶಾಂತಿಪುರದಲ್ಲಿ ರೋಡ್ ಶೋ ನಡೆಸಿದ್ದಾರೆ. ಮಕ್ಕಳೂ ಸೇರಿದಂತೆ ನೂರಾರು ಜನರು ಭಾರೀ ಸಂಖ್ಯೆಯಲ್ಲಿ ಸಾಮಾಜಿಕ ಅಂತರ ಪಾಲಿಸದೆ ನೆರೆದಿರುವ ಮತ್ತು ಮಾಸ್ಕ್ ಇಲ್ಲದೆ ಷಾ ಜನರಿಗೆ ನಮಸ್ಕಾರ ಮಾಡುತ್ತಿರುವ ಚಿತ್ರಗಳು ಜಾಲತಾಣದಲ್ಲಿ ಹರಿದಾಡುತ್ತಿವೆ.
Union Home Minister and Bharatiya Janata Party leader Amit Shah holds a roadshow in Nadia district's Santipur. He will speak to media shortly#WestBengalPollspic.twitter.com/bjRQjR6oMg
— ANI (@ANI)April 11, 2021

ಮತ್ತೊಂದೆಡೆ, ಬಂಗಾಳದ ಸಿಎಂ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಜಲ್​ಪೈಗುರಿಯಲ್ಲಿ ಭಾರೀ ಪ್ರಚಾರ ಸಭೆ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷವೂ ತನ್ನ ಅಭ್ಯರ್ಥಿಗಳು ನಡೆಸುತ್ತಿರುವ ಪ್ರಚಾರ ಕಾರ್ಯಗಳ ಫೋಟೋಗಳನ್ನು ತನ್ನ ಟ್ವಿಟರ್​​ ಖಾತೆಯಲ್ಲಿ ಶೇರ್ ಮಾಡಿದ್ದು, ನಾಯಕರು ಮತ್ತು ಜನರು ಮಾಸ್ಕ್ ಧರಿಸದೆ ಪಾಲ್ಗೊಳ್ಳುತ್ತಿರುವುದು ಕಂಡುಬಂದಿದೆ.(ಏಜೆನ್ಸೀಸ್)
ಕರೊನಾ ಲಸಿಕೆ : ಅತಿ ವೇಗದಲ್ಲಿ 10 ಕೋಟಿ ಡೋಸ್​ ನೀಡಿರುವ ಭಾರತ !

ರಜೆಯಲ್ಲಿದ್ದ ಸೈನಿಕನನ್ನು ಗುಂಡಿಟ್ಟು ಕೊಂದ ಭಯೋತ್ಪಾದಕರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
