ಕೋಲ್ಕತಾ:ಅತಿ ಸಣ್ಣ ವಯಸ್ಸಿನಲ್ಲೇ ಜೀವನಕ್ಕೆ ವಿದಾಯ ಹೇಳಿರುವ ನಟಿಯು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಾನು ವಾಸವಿದ್ದ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಂಗಾಲಿ ಕಿರುತೆರೆ ಖ್ಯಾತ ನಟಿ ಪಲ್ಲವಿ ಡೇ ಭಾನುವಾರ ತಮ್ಮ ಮನೆಯಲ್ಲಿನ ಫ್ಯಾನ್​ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.  ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅಷ್ಟರಲ್ಲೇ ಪ್ರಾಣ ಪಕ್ಷಿ ಹಾರಿಹೋಗಿತ್ತು.
ನಟಿಯು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದು ಮಾತ್ರ ನಿಗೂಢವಾಗಿದೆ. ಅಂತಹ ಪರಿಸ್ಥಿತಿ ಏನೂ ಇರಲಿಲ್ಲ ಎಂದು ಅವರ ಸಹೋದ್ಯೋಗಿಗಳು ಹೇಳಿದ್ದಾರೆ. ಇನ್ನು ಆಕೆಯ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕವೇ ಯಾವ ರೀತಿ ಸಾವನ್ನಪ್ಪಿದ್ದಾರೆ ಎಂಬುದು ಬಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಬಾಂಗ್ಲಾದ ಪ್ರಸಿದ್ಧ ಧಾರವಾಹಿಯೊಂದರಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದ ಈಕೆ ಎರಡು ದಿನಗಳ ಹಿಂದಷ್ಟೇ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ದಕ್ಷಿಣ ಕೋಲ್ಕತ್ತಾದ ಗರ್ಫಾ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪವಿತ್ರ ಈ ಹಿಂದೆಯೂ ಹಲವು ಖ್ಯಾತ ಧಾರವಾಹಿಗಳಲ್ಲಿ ನಟಿಸಿದ್ದಾರೆ. ಸದ್ಯ ಮರಣೋತ್ತರ ವರದಿ ಬಂದ ಬಳಿಕವೇ ಸತ್ಯ ಬಯಲಾಗಿದೆ.(ಏಜೆನ್ಸೀಸ್​)
ಫೇಸ್​ಬುಕ್​ ಪೋಸ್ಟ್​ನಿಂದಾಗಿ ಜೈಲು ಸೇರಿದ ನಟಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + five =
Remember me
