ಬಾರಾನಗರ: ಶೂಟಿಂಗ್ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಾಲಿ ನಟಿಯೊರ್ವಳು ಮೃತಪಟ್ಟಿದ್ದಾಳೆ. ಈ ದುರ್ಘಟನೆಯು ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯ ಬಾರಾನಗರದಲ್ಲಿ ನಡೆದಿದ್ದು, ನಟಿ ಸುಚಂದ್ರಾ ದಾಸ್‌ಗುಪ್ತ ಮೃತಪಟ್ಟಿದ್ದು ಖಚಿತ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಸೈಬರ್ ದಾಳಿ: ಬೈಕ್​ಗಳ ಉತ್ಪಾದನೆ ನಿಲ್ಲಿಸಿದ ಸುಜುಕಿ
ಸುಚಂದ್ರಾ ದಾಸ್‌ಗುಪ್ತ ಹಲವಾರು ಜನಪ್ರಿಯ ಬಂಗಾಳಿ ದೂರದರ್ಶನ ಕಾರ್ಯಕ್ರಮಗಳನ್ನು ನಿರೂಪಿಸುವುದರ ಜತೆಗೆ ಹಲವಾರು ಧಾರಾವಾಹಿಗಳಲ್ಲಿ ಪೋಷಕ ಪಾತ್ರವನ್ನು ನಿರ್ವಹಿಸಿ ಜನಪ್ರಿಯತೆಯನ್ನು ಗಳಿಸಿದ್ದರು.
ಶೂಟಿಂಗ್ ನಂತರ, ನಟಿಯು ಶನಿವಾರ ರಾತ್ರಿ ಮನೆಗೆ ಮರಳಲು ಅಪ್ಲಿಕೇಶನ್ ಆಧಾರಿತ ಬೈಕ್ ರೈಡ್​ ಬುಕ್ ಮಾಡಿ ಅಲ್ಲಿಂದ ಹೊರಟಿದ್ದಾರೆ. ಈ ನಡುವೆ ಸೈಕಲ್​ ಸವಾರನೊಬ್ಬ ಇದ್ದಕ್ಕಿದ್ದಂತೆ ಬೈಕ್ ಮುಂದೆ ಬಂದಿದ್ದರಿಂದ ಚಾಲಕ ಬ್ರೇಕ್​ ತುಳಿದಿದ್ದಾನೆ. ಒಮ್ಮಿಂದೊಮ್ಮೇಲೆ ಬ್ರೇಕ್​ ತುಳಿದ ಪರಿಣಾಮ ನಟಿಯು ಬೈಕ್‌ನಿಂದ ಕೆಳಗೆ ಬಿದ್ದಿದ್ದು, ಈ ವೇಳೆ ಆಕೆಯ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮರಣ ಹೊಂದಿದ್ದಾಳೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಟ್ರಕ್ ಚಾಲಕನನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − six =
Remember me
