ಬೆಂಗಳೂರು:ಲಿವ್​ ಇನ್​ ರಿಲೇಷನ್​ಶಿಪ್​ನಲ್ಲಿದ್ದ ಸಂಗಾತಿಯನ್ನು​ ಕುಕ್ಕರ್​ನಲ್ಲಿ ಹೊಡೆದು ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು 29 ವರ್ಷದ ಯುವಕನನ್ನು ವಶಕ್ಕೆ ಪಡೆದಿದ್ದಾರೆ.
ತಾನು ಲಿವ್​ ಇನ್​ ರಿಲೇಷನ್​ಶಿಪ್​ನಲ್ಲಿದ್ದ ಹುಡುಗಿ ತನಗೆ ಮೋಸ ಮಾಡುತ್ತಿದ್ದಾಳೆ ಎಂದು ಶಂಕಿಸಿ ಆರೋಪಿ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇರಳ ಮೂಲದ ವೈಷ್ಣವ್​ (29) ಹಾಗೂ ದೇವಾ (24) ಕಳೆದ ಎರಡು ವರ್ಷಗಳಿಂದ ಲಿವ್ ಇನ್​ ರಿಲೇಷನ್​ಶಿಪ್​ನಲ್ಲಿದ್ದರು. ಕಾಲೇಜು ದಿನಗಳಿಂದಲ್ಲೇ ಇಬ್ಬರು ಸ್ನೇಹಿತರಾಗಿದ್ದು, ಖಾಸಗಿ ಕಂಪನಿಯೊಂದರ ಮಾರಾಟ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.
ಇದನ್ನೂ ಓದಿ:ಪ್ರಿಯಕರನ ವಿರುದ್ಧ ಸುಳ್ಳು ಸಾಕ್ಷಿ ಹೇಳಲು ನಕಾರ; ಗರ್ಭಿಣಿಯನ್ನು ಕೊಂದ ಪೋಷಕರು
ಆರೋಪಿ ವೃಷ್ಣವ್​ ತನ್ನ ಸಂಗಾತಿ ತನಗೆ ಮೋಸ ಮಾಡುತ್ತಿದ್ದಾಳೆ ಎಂದು ಭಾವಿಸಿ ಆಕೆಯ ಜೊತೆ ಜಗಳ ತೆಗೆದಿದ್ದಾನೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಆಕೆಯ ಮೇಲೆ ಹಲ್ಲೆ ನಡೆಸಿ​ ಕುಕ್ಕರ್​​ನಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಸುಮಾರು ಘಂಟೆಗಳಿಂದ ದೇವಾ ಕರೆ ಸ್ವೀಕರಿಸಿದೆ ಇದ್ದಾಗ ಅನುಮಾನಗೊಂಡ ಆಕೆಯ ಸಹೋದರಿ ನೆರೆಹೊರೆಯವರಿಗೆ ಪರಿಶೀಲಿಸುವಂತೆ ತಿಳಿಸಿದ್ದಾರೆ.
ನೆರೆಹೊರೆಯವರು ದೇವಾ ಮನೆ ಬಳಿ ತೆರಳಿ ಪರಿಶೀಲನೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದ್ದು, ಕೂಡಲೇ ಪೊಲೀಸರಿಗೆ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ತಲೆಮಾರಿಸಿಕೊಂಡಿದ್ದ ಆರೋಪಿ ವೃಷ್ಣವ್​ನನ್ನು ವಶಕ್ಕೆ ಪಡೆದಿದ್ದಾರೆ.
ವೃಷ್ಣವ್​ ಹಾಗೂ ದೇವಾ ಲಿವ್​ ಇನ್​ ರಿಲೇಷನ್​ಶಿಪ್​ನಲ್ಲಿದ್ದ ವಿಚಾರ ಅವರ ಪೋಷಕರಿಗೂ ಸಹ ತಿಳಿದಿತ್ತು. ವೈಷ್ಣವ್​ ಆಗಾಗ ದೇವಾ ಜೊತೆ ಜಗಳವಾಡುತ್ತಿದ್ದ ವಿಚಾರವೂ ಸಹ ಎಲ್ಲರಿಗೂ ತಿಳಿದಿತ್ತು ಮತ್ತು ಪೋಷಕರ ಸಮ್ಮುಖದಲ್ಲಿ ರಾಜಿ ಸಂಧಾನ ನಡೆದಿತ್ತು ಎಂದು ಮೃತ ಯುವತಿಯ ಪೋಷಕರು ತಿಳಿಸಿರುವುದಾಗಿ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಸಿ.ಕೆ. ಬಾಬಾ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 15 =
Remember me
