ಬೆಂಗಳೂರು:ನಗರದ ಮಂದಾವರ ಬಳಿಯಿರುವ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರ (ಬಿಐಇಸಿ) ದಲ್ಲಿ ನಡೆಯಲಿರುವ 3 ದಿನಗಳ ‘ಭಾರತ ಇಂಧನ ಸಪ್ತಾಹ’ಕ್ಕೆ ಪ್ರಧಾನಿ ಮೋದಿ ಅವರು ಇಂದು (ಫೆ.6) ಚಾಲನೆ ನೀಡಿದರು.
ಇಂದು ಬೆಳಗ್ಗೆ 10.50ಕ್ಕೆ ಬೆಂಗಳೂರಿನ ಎಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ, ಹೆಲಿಕಾಪ್ಟರ್​ ಮೂಲಕ ಬಿಐಇಸಿಗೆ ತೆರಳಿ ಕಾರ್ಯಕ್ರಮ ಉದ್ಧಾಟಿಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಐದು ಗಣ್ಯರಿಗೆ ಮಾತ್ರ ಉಪಸ್ಥಿತರಿದ್ದರು. ಪ್ರಧಾನಿ ಮೋದಿ, ಕೇಂದ್ರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್​ ಸಿಂಗ್​ ಪುರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಕೇಂದ್ರ ವಿದ್ಯುತ್ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಆರ್.ಕೆ .ಸಿಂಗ್ ಉಪಸ್ಥಿತರಿದ್ದರು.
ಜಾಗತಿಕ ಇಂಧನ ಪರಿವರ್ತನೆಯಲ್ಲಿ ಭಾರತದ ಪಾತ್ರಕ್ಕಾಗಿ ಪ್ರಧಾನ ಮಂತ್ರಿಯವರ ದೀರ್ಘಾವಧಿಯ ದೃಷ್ಟಿಕೋನದಿಂದ ಈ ಇಂಡಿಯಾ ಎನರ್ಜಿ ವೀಕ್ ಕಾರ್ಯಕ್ರಮವು ಹುಟ್ಟಿಕೊಂಡಿದೆ ಎಂದು ಕೇಂದ್ರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್​ ಸಿಂಗ್​ ಪುರಿ ಹೇಳಿದರು.
ವಾತಾವರಣದಲ್ಲಿ ಇಂಗಾಲಾಮ್ಲ (ಸಿಒ2) ಪ್ರಮಾಣ ತಗ್ಗಿಸದಿದ್ದರೆ ಉಳಿಗಾಲವಿಲ್ಲವೆಂದು ಜಗತ್ತು ಅರಿತಿದ್ದು, ಈ ನಿಟ್ಟಿನಲ್ಲಿ ಹಸಿರು ಇಂಧನ ಉಪಕ್ರಮಗಳಿಗೆ ಭಾರತವೇ ಮೇಲ್ಪಂಕ್ತಿ ಹಾಕಿಕೊಟ್ಟಿದೆ. 30ಕ್ಕೂ ಹೆಚ್ಚು ಸಚಿವರು, 30 ಸಾವಿರಕ್ಕೂ ಅಧಿಕ ಇಂಧನ ವಲಯದ ಪ್ರತಿನಿಧಿಗಳು, 500ಕ್ಕೂ ಹೆಚ್ಚು ಭಾಷಣಕಾರರು ಭವಿಷ್ಯದ ಸವಾಲುಗಳನ್ನು ಮೂರು ದಿನಗಳ ಸಪ್ತಾಹದಲ್ಲಿ ರ್ಚಚಿಸಲಿದ್ದಾರೆ.
ಜನಮತಕ್ಕೆ ಮೋದಿ ಹಸಿರುಪಥ!; ಬೆಂಗಳೂರು, ತುಮಕೂರಿನಲ್ಲಿ ಇಂದು ಪ್ರಧಾನಿ ಸಂಚಲನ

ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ: ಇಂಡಿಯಾ ಎನರ್ಜಿ ಸಪ್ತಾಹ ಉದ್ಘಾಟಿಸಿ ಮಧ್ಯಾಹ್ನ ತುಮಕೂರಿಗೆ ಭೇಟಿ

ಕಿಡಿಗೇಡಿಗಳ ಅಟ್ಟಹಾಸ! ಒಂದು ಎಕರೆಯಲ್ಲಿದ್ದ ಅಡಿಕೆ ಗಿಡ ಕಡಿದು ಹಾಕಿದ ದುಷ್ಕರ್ಮಿಗಳು

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:14 + thirteen =
Remember me
