ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನ.11ರಂದು ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲನ್ನು ಲೋಕಾರ್ಪಣೆ ಮಾಡಿದ್ದರು. ಈ ರೈಲು ಚೆನ್ನೈ – ಮೈಸೂರು ನಡುವೆ ಸಂಚರಿಸಲಿದೆ. ಇದೀಗ ವಂದೇ ಭಾರತ್ ರೈಲಿನ ಪ್ರಯಾಣದ ವೇಳೆ ಬೆಂಗಳೂರಿನ ವಿದ್ಯಾರ್ಥಿಯೊಬ್ಬ, ವಂದೇ ಭಾರತ ಮಾತರಂ ಹಾಡಿನ್ನು ಕೊಳಲಿನ ಮೂಲಕ ನುಡಿಸಿದ್ದಾನೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ದ್ವಿತೀಯ ಪಿಯುಸಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಅಪ್ರಮೇಯ ಶೇಷಾದ್ರಿ, ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿನಲ್ಲಿ, ಕೊಳಲು ನುಡಿಸಿದ ವಿದ್ಯಾರ್ಥಿ. ಇದೀಗ ಈ ವಿಡಿಯೋವನ್ನು ರೈಲ್ವೇ ಅಧಿಕಾರಿ ಅನಂತ್ ರೂಪನಗುಡಿ ತಮ್ಮ ಟ್ವಿಟರ್ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ಅಲ್ಲದೇ ಅದ್ಭುತವಾಗಿ ಕೊಳಲಿನ ಮೂಲಕ ವಂದೇ ಭಾರತ ಮಾತರಂ ಹಾಡನ್ನು ನುಡಿಸಿದ್ದಾರೆ ಎಂದು ಶ್ಲಾಘಿಸಿದ್ದಾರೆ.
Aprameya Seshadri, a 12th student from Bengaluru, playing the wonderful Vande Mataram tune on the flute!#IndianRailways#VandeBharatTrain#VandeBharatpic.twitter.com/q89cwfccIa— Ananth Rupanagudi (@Ananth_IRAS)November 11, 2022
Aprameya Seshadri, a 12th student from Bengaluru, playing the wonderful Vande Mataram tune on the flute!#IndianRailways#VandeBharatTrain#VandeBharatpic.twitter.com/q89cwfccIa
ಟ್ವಿಟರ್​ನಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋವನ್ನು ನೋಡಿದ ಅನೇಕರು, ಅಪ್ರಮೇಯನ ಪ್ರತಿಭೆಯನ್ನು ಕೊಂಡಾಡಿದ್ದಾರೆ. ಕೊಳಲು ನುಡಿಸುವ ವೇಳೆ ರೈಲಿನಲ್ಲಿದ್ದ ಸಹಪ್ರಯಾಣಿಕರು ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ದಕ್ಷಿಣ ಭಾರತದ ಮೊದಲ ‘ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲು’ ಹಾಗೂ ‘ಭಾರತ್ ಗೌರವ್ ಕಾಶಿ ದರ್ಶನ್’ ರೈಲುಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
