ಬೆಂಗಳೂರು:ಏರ್‌ಪೋರ್ಟ್ ಕಸ್ಟಮ್ಸ್ ಅಧಿಕಾರಿ ಎಂದು 25 ವರ್ಷದ ಯುವಕಮ್ಯಾಟ್ರಿಮೊನಿ ಸೈಟ್‌ನಲ್ಲಿ ತೆರೆದು ಫೋಟೋ ಹಾಕಿ ನಕಲಿ ಖಾತೆಯನ್ನು ತೆರೆದ ಅಂಕಲ್ ಬರೋಬ್ಬರಿ 250 ಮಹಿಳೆಯರಿಗೆ ವಂಚನೆ ಮಾಡಿದ್ದಾನೆ.
ಮ್ಯಾಟ್ರಿಮೊನಿಯಲ್ ವೆಬ್‌ಸೈಟ್‌‌ಗಳಲ್ಲಿ ನಕಲಿ ಖಾತೆ ಸೃಷ್ಟಿಸಿಕೊಂಡು, ವಿಧವೆ, ವಿಚ್ಛೇದಿತ ಮಹಿಳೆಯರನ್ನ ಪರಿಚಯ ಮಾಡಿಕೊಳ್ಳುತ್ತಿದ್ದನಂತೆ. ಬಳಿಕ ಬೆಂಗಳೂರಿಗೆ ಮಾತುಕತೆಗೆಂದು ಕರೆಸಿಕೊಳ್ತಿದ್ದನಂತೆ. ಈ ವೇಳೆ ಅವರಿಗೆ ವಿವಿಧ ಕಾರಣಗಳನ್ನು ಹೇಳಿ ವಂಚನೆ ಮಾಡಿ ಎಸ್ಕೇಪ್ ಆಗುತ್ತಿದ್ದ ಎನ್ನಲಾಗಿದೆ.
ಕೊಯಮತ್ತೂರು ಮೂಲದ ಮಹಿಳೆಯೊಬ್ಬರನ್ನ ಮದುವೆ ಮಾತುಕತೆಗೆ ಬೆಂಗಳೂರಿಗೆ ಕರೆಸಿಕೊಳ್ಳುತ್ತಿದ್ದನು. ಬಳಿಕ ಟಿಕೆಟ್ ರಿಸರ್ವೇಷನ್ ಮಾಡಿಸಬೇಕಿರುವುದರಿಂದ ಪರ್ಸ್ ಮನೆಯಲ್ಲಿಯೇ ಬಿಟ್ಟು ಬಂದಿದ್ದಾಗಿ ತಿಳಿಸಿ ಹಣ ಪಡೆಯುತ್ತಿದ್ದನು. ಆರೋಪಿ ಎರಡು ಸಿಮ್ ಕಾರ್ಡ್ ಗಳನ್ನ ಬ್ಲಾಕ್ ನಲ್ಲಿ  ಬಳಸುತ್ತಿದ್ದನು. ಹಿಂದಿ ಪತ್ರಿಕೆಯಲ್ಲಿ ಜಾಹಿರಾತಿನಲ್ಲಿ ಬರುವ ವಧು -ವರ ಮೊಬೈಲ್ ಪೋನ್ ಮಾಡುತ್ತಿದ್ದನು. ಅಗರ್ ಸೇನಾಜಿ ವೈವಾಹಿಕ ಮಂಚ್ ಎಂಬ ವಾಟ್ಸಪ್ ಗ್ರೂಪ್ ನಲ್ಲಿ ಸೇರ್ಪಡೆಕೊಳ್ಳುತ್ತಿದ್ದನು.
ಮಹಿಳೆಯರನ್ನು ಗುರುತಿಸಿ ಅವರನ್ನ ಪೋನ್ ಮೂಲಕ ಮಾತನಾಡಿ ಅವರೊಂದಿಗೆ ಸಲುಗೆ ಬೆಳಸಿ ಮದುವೆ ಆಗುವುದಾಗಿ  ನಂಬಿಸುತ್ತಿದ್ದನು. ರಾಜಸ್ಥಾನದ 56, ಉತ್ತರ ಪ್ರದೇಶದ 32, ದೆಹಲಿಯ 32, ಕರ್ನಾಟಕದ 17, ಮಧ್ಯಪ್ರದೇಶದ 16, ಮಹಾರಾಷ್ರ ದ 13, ಗುಜರಾತ್ 11 ಮಹಿಳೆಯರಿಗೆ ವಂಚನೆ  ಮಾಡಿರುವುದು ತನಿಖೆ ವೇಳೆ ಪತ್ತೆಯಾಗಿದೆ. ಇದೇ ರೀತಿ ಹಲವು ಮಹಿಳೆಯರಿಗೆ ವಂಚನೆ ಮಾಡಿದ ಪ್ರಕರಣಗಳು ಬಯಲಿಗೆ ಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ಗಳಲ್ಲಿ ನಕಲಿ ಖಾತೆ ಸೃಷ್ಟಿಸಿಕೊಂಡು ವಂಚನೆ ಮಾಡುತ್ತಿದ್ದನು. ಅದರಲ್ಲಿಯೂ ವಿಧವೆಯರು ಹಾಗೂ ವಿಚ್ವೇದಿತ ಮಹಿಳೆಯರಿಗೆ ವಂಚನೆ ಮಾಡುವುದು ಈತನ ಖಯಾಲಿಯಾಗಿತ್ತು. ಏರ್ ಪೋರ್ಟ್ಕಸ್ಟಮ್ಸ್‌ ಅಧಿಕಾರಿ ಎಂದು ಮಹಿಳೆಯರಿಗೆ ವಂಚನೆ ಮಾಡುತ್ತಿದ್ದ ನರೇಶ್ ಪುರಿ ಗೋಸ್ವಾಮಿಆರೋಪಿಯಾಗಿದ್ದಾನೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twelve + ten =
Remember me
