ನವದೆಹಲಿ:ಸಾಮಾನ್ಯವಾಗಿ ನಾವುಗಳು ನೋಡಿರುವಂತೆ ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಸವಾರರು ಹಿಂಬದಿ ಕುಳಿತಿರುವವರ ಜೊತೆ ಮಾತನಾಡುತ್ತ ಚಾಲನೆ ಮಾಡುತ್ತಿರುವುದನ್ನು ನೋಡಿದ್ದೇವೆ. ಇದರಿಂದ ಅನೇಕ ಬಾರಿ ಅಪಘಾತಗಳಾಗಿದ್ದು, ಅನೇಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇದನ್ನು ತಡೆಯಲು ಕೇರಳ ಸರ್ಕಾರ ಮುಂದಾಗಿದ್ದು, ಹೊಸ ಕಾಯ್ದೆಯನ್ನು ಜರಿಗೆ ತರಲು ಸಿದ್ಧತೆ ನಡೆಸಿದೆ.
ಕೇರಳದ ಮೋಟಾರು ವಾಹನ ಇಲಾಖೆಯೂ ದ್ವಿಚಕ್ರ ವಾಹನ ಸವಾರರನ್ನು ಗುರಿಯಾಗಿರಿಸಿಕೊಂಡು ರಸ್ತೆ ಸುರಕ್ಷತೆಯನ್ನು ಸುಧಾರಿಸಲು ಹೊಸ ನಿಯಮವನ್ನು ಪರಿಚಯಿಸಿದೆ. ಈ ನಿಯಮವು ಗೊಂದಲವನ್ನು ಪರಿಹರಿಸುವ ಜೊತೆಗೆ ಅಪಘಾತವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ.
ಇದನ್ನೂ ಓದಿ:ಠಾಕ್ರೆ ವಿರುದ್ಧ ಸುಳ್ಳು ಅಫಿಡೆವಿಟ್​ ಸಲ್ಲಿಸುವಂತೆ ಫಡ್ನವೀಸ್​ ಒತ್ತಾಯ; ಡಿಸಿಎಂ ವಿರುದ್ಧ ಮಾಜಿ ಗೃಹಮಂತ್ರಿ ಬಾಂಬ್
ಈ ನಿಯಮದಡಿ ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಹಿಂಬದಿ ಸವಾರರ ಜೊತೆ ಮಾತನಾಡಿದರೆ ಅವರಿಗೆ ದಂಡ ವಿಧಿಸಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಅಧಿಕೃತ ಸೂಚನೆಯನ್ನು ಹೊರಡಿಸಲಾಗಿದ್ದು, ಇದಕ್ಕಾಗಿ ಪ್ರತ್ಯೇಕ ಮಾರ್ಗಸೂಚಿಯನ್ನು ಸಿದ್ದಪಡಿಸಲು ಸರ್ಕಾರ ಸಮಿತಿಯೊಂದನ್ನು ನೇಮಿಸಿದೆ. ಅದರಂತೆ ಈ ಸಮಿತಿಯು ದಂಡದ ಮೊತ್ತ ಸೇರಿದಂತೆ ಎಲ್ಲಾ ವಿಚಾರಗಳನ್ನು ನಿರ್ಧರಿಸಲಿದೆ.
ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡುವಾಗ ಪಿಲಿಯನ್‌ನೊಂದಿಗೆ ಮಾತನಾಡುವುದು ಅಪಾಯಕಾರಿ ಏಕೆಂದರೆ ಅದು ಸವಾರನ ಗಮನವನ್ನು ಬೇರೆಡೆ ಸೆಳೆಯುತ್ತದೆ. ಇದರಿಂದ ಅಪಘಾತಗಳು ಸಂಭವಿಸುವ ಸಾಧ್ಯತೆಯಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಕೇರಳ ಸರ್ಕಾರ ಈ ಕ್ರಮಕೈಗೊಂಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
