ಜೈಪುರ:ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಶಾಸಕ ಭಜನ್​ಲಾಲ್ ಶರ್ಮಾ​ ಆಯ್ಕೆಯಾಗಿದ್ದಾರೆ. ಮಂಗಳವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಬಳಿಕ ಈ ನಿರ್ಧಾರ ಹೊರಬಿದ್ದಿದೆ. ಸ್ಪೀಕರ್​ ಆಗಿ ಶಾಸಕ ವಾಸುದೇವ್​ ದೇವ್ನಾನಿ ಅವರನ್ನು ನೇಮಿಸಲಾಗಿದೆ.
ಮಾಜಿ ಸಿಎಂ ವಸುಂಧರಾ ರಾಜೇ, ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್, ಗಜೇಂದ್ರ ಸಿಂಗ್​ ಶೇಖಾವತ್​, ಅಶ್ವಿನಿ ವೃಷ್ಣವ್, ಸಂಸದರಾದ ಬಾಬಾ ಬಾಲಕನಾಥ್​, ದಿಯಾ ಕುಮಾರಿ ಸೇರಿದಂತೆ ಅನೇಕ ಹಿರಿಯ ನಾಯಕರನ್ನು ಹಿಂದಿಕ್ಕಿ ಮೊದಲ ಬಾರಿ ಶಾಸಕರಾಗಿರುವ 56 ವರ್ಷದ ಭಜನ್​ಲಾಲ್​ ಶರ್ಮಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.
ಜೈಪುರದ ಖಾಸಗಿ ಹೋಟೆಲ್​ ಒಂದರಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ವೀಕ್ಷಕರಾದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸರೋಜ್ ಪಾಂಡೆ ಮತ್ತು ವಿನೋದ್ ತಾವ್ಡೆ ಅವರು ಶಾಸಕಾಂಗ ಪಕ್ಷದ ಸಭೆ ಮುಕ್ತಾಯಗೊಂಡ ನಂತರ ಭಜನ್​ಲಾಲ್​ ಶರ್ಮಾ ಅವರನ್ನು ರಾಜ್ಯದ ಮುಖ್ಯಮಂತ್ರಿಯಾಗಿ ಘೋಷಿಸಿದ್ದಾರೆ.
200 ಸದಸ್ಯಬಲದ ರಾಜಸ್ಥಾನ ವಿಧಾನಸಭೆಯಲ್ಲಿ ಬಿಜೆಪಿ 115 ಸ್ಥಾನಗಳನ್ನು ಗೆದ್ದಿದ್ದು, ಕಾಂಗ್ರೆಸ್​ 69 ಸ್ಥಾನಗಳಲ್ಲಿ ಜಯಿಸಿದೆ. ಕಾಂಗ್ರೆಸ್​ ಅಭ್ಯರ್ಥಿಯ ನಿಧನದಿಂದಾಗಿ ಕರಣ್​ಪುರದ ಕ್ಷೇತ್ರದ ಮತದಾನವನ್ನು ಜನವರಿ 05ಕ್ಕೆ ಮುಂದೂಡಲಾಗಿದೆ.
#WATCH| BJP names Bhajanlal Sharma as the new Chief Minister of Rajasthanpic.twitter.com/j3awHnmH7k
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + ten =
Remember me
