ಕೋಲ್ಕತ:ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೆಲವು ನಿಯಮಗಳು ಕಾರ್ಮಿಕ ವಿರೋಧಿಯಾಗಿದೆ ಎಂದು ಆರೋಪಿಸಿ ದೇಶದ ವಿವಿಧ ಸಂಘಟನೆಗಳು ಕರೆ ನೀಡಿರುವ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹೀಗಿದ್ದರೂ ಮುಂಜಾಗ್ರತ ಕ್ರಮವಾಗಿ ದೇಶದೆಲ್ಲೆಡೆ ಪೊಲೀಸ್​ ಬಂದೋಬಸ್ತ್​ ಮಾಡಲಾಗಿದೆ.
ದೇಶದ ಹಲೆವೆಡೆ ವಿವಿಧ ಸಂಘಟನೆಗಳು ಕೇಂದ್ರ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸುತ್ತಿದ್ದು, ಇದರ ನಡುವೆ ಪಶ್ಚಿಮ ಬಂಗಾಳದಲ್ಲಿ ಕಂಡುಬಂದ ದೃಶ್ಯವೊಂದು ನೆಟ್ಟಿಗರ ಗಮನ ಸೆಳೆದಿದೆ.
ಉತ್ತರ ಬಂಗಾಳದ ರಾಜ್ಯ ಸಾರಿಗೆ ಸಂಸ್ಥೆಯ ಬಸ್​ ಚಾಲಕರೊಬ್ಬರು ಮುನ್ನೆಚ್ಚರಿಕಾ ಕ್ರಮವಾಗಿ ಹೆಲ್ಮೆಟ್​ ಧರಿಸಿ ಬಸ್​ ಚಾಲನೆ ಮಾಡಿದ್ದು, ಗಮನ ಸೆಳೆದಿದೆ. ಪ್ರತಿಭಟನೆ ಉಗ್ರ ರೂಪಕ್ಕೆ ತಿರುಗಬಹುದು ಎಂಬ ಎಚ್ಚರಿಕೆಯಿಂದ ಆತ್ಮರಕ್ಷಣೆಗಾಗಿ ಹೆಲ್ಮೆಟ್​ ಧರಿಸಿ ಬಂದಿದ್ದಾರೆ.
ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಚಾಲಕನೇನೂ ಹೆಲ್ಮೆಟ್​ ಧರಿಸಿದ್ದಾರೆ. ಪ್ರಯಾಣಿಕರ ಕತೆಯೇನು ಎಂದು ನೆಟ್ಟಿಗರೊಬ್ಬರು ಪ್ರಶ್ನಿಸಿದ್ದಾರೆ. ಹಾಗೇಯೇ ಚಾಲಕನ ಬುದ್ಧಿವಂತಿಕೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.(ಏಜೆನ್ಸೀಸ್​)
Prevention is Better than Cure.https://t.co/M0BBDnMHCs— Pankaj Thapliyal (@PankajT04765688)January 8, 2020
Prevention is Better than Cure.https://t.co/M0BBDnMHCs
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 10 =
Remember me
