ಅಸ್ಸಾಂ:ಭಾರತೀಯ ಯುವ ಕಾಂಗ್ರೆಸ್​ನ ಹಲವು ವಾಹನಗಳ ಮೇಲೆ ಬಿಜೆಪಿಯ ಯುವ ಘಟಕವಾದ ಭಾರತೀಯ ಜನತಾ ಯುವ ಮೋರ್ಚಾ (BJYM) ಕಾರ್ಯಕರ್ತರು ಉದ್ದೇಶಿತ ದಾಳಿ ನಡೆಸಿದೆ ಎಂದು ಆರೋಪಿಸಿದ ಕಾಂಗ್ರೆಸ್​ ಇದೀಗ ದೂರು ದಾಖಲಿಸಲು ಮುಂದಾಗಿದೆ ಎಂದು ವರದಿ ತಿಳಿಸಿದೆ. ಘಟನೆ ಅಸ್ಸಾಂನ ಲಖಿಂಪುರ ಜಿಲ್ಲೆಯಲ್ಲಿ ವರದಿಯಾಗಿದೆ.
ಇದನ್ನೂ ಓದಿ:ತುಂಗಭದ್ರಾ ನೀರಾವರಿ ನಿಗಮದಲ್ಲಿ 650 ಕೋಟಿ ರೂ. ಅವ್ಯವಹಾರ, 28 ಅಧಿಕಾರಿಗಳು ಸಸ್ಪೆಂಡ್
ಕಾಂಗ್ರೆಸ್ ನಾಯಕರ ಪ್ರಕಾರ, ಲಖಿಂಪುರ ಜಿಲ್ಲೆಗೆ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಪ್ರವೇಶಕ್ಕೂ ಮುನ್ನ ಶುಕ್ರವಾರ ರಾತ್ರಿ ಬಿವೈಜಿಎಂ (BJYM) ಕಾರ್ಯಕರ್ತರು ಕಾಂಗ್ರೆಸ್​ನ ವಾಹನಗಳನ್ನು ಧ್ವಂಸಗೊಳಿಸಿದ್ದಾರೆ. ಬಿಜೆವೈಎಂ ಕಾರ್ಯಕರ್ತರು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಭಾವಚಿತ್ರವನ್ನು ವಿರೂಪಗೊಳಿಸಿದ್ದಾರೆ ಮತ್ತು ರಾಹುಲ್ ಗಾಂಧಿ ಫೋಟೋವಿರುವ ಬ್ಯಾನರ್ ಹಾಗೂ ಕಟೌಟ್‌ಗಳಿಗೆ ಹಾನಿ ಮಾಡಿದ್ದಾರೆ ಎಂದು ಪಕ್ಷವು ಆರೋಪಿಸಿದೆ.
ದಾಳಿಯಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸುವಂತೆಯೂ ಕಾಂಗ್ರೆಸ್ ಆಗ್ರಹಿಸಿದೆ. ಘಟನೆ ಬಗ್ಗೆ ಮಾತನಾಡಿದ ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ, “ಬಿಜೆಪಿಯೊಂದಿಗೆ ಸಂಬಂಧ ಹೊಂದಿರುವ ಕೆಲವರು ಶುಕ್ರವಾರ ಸಂಜೆ ಲಖಿಂಪುರದಲ್ಲಿದ್ದ ನಮ್ಮ ವಾಹನಗಳ ಮೇಲೆ ದಾಳಿ ಮಾಡಿ ಧ್ವಂಸಗೊಳಿಸಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ:ಹಿರಿಯ ರಾಜಕಾರಣಿಗಳ ಕುಟುಂಬದವರನ್ನು ಗೌರವಯುತವಾಗಿ ನಡೆಸಿಕೊಳ್ಳದ ಕಾಂಗ್ರೆಸ್: ಎಂಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಸಿ.ಪಿ.ಉಮೇಶ್ ಟೀಕೆ
ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಸೂಚನೆಯ ಮೇರೆಗೆ ನಮ್ಮ ವಾಹನಗಳ ಮೇಲೆ ಈ ರೀತಿಯ ದಾಳಿ ನಡೆಸಲಾಗಿದೆ ಎಂದು ಬೋರಾ ಆರೋಪಿಸಿದ್ದಾರೆ,(ಏಜೆನ್ಸೀಸ್).
‘ಹನು-ಮಾನ್’ VS ‘ಗುಂಟೂರು ಕಾರಂ’: ಬಾಕ್ಸ್​ ಆಫೀಸ್​ನಲ್ಲಿ ಯಾರು ಮೇಲುಗೈ? ಇಲ್ಲಿದೆ ವಿವರ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − five =
Remember me
