ನವದೆಹಲಿ:ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 9 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷವು ದೇಶದ ಎಲ್ಲಾ ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡು ಒಂದು ತಿಂಗಳ ಕಾಲ ಬೃಹತ್ “ವಿಶೇಷ ಸಂಪರ್ಕ ಅಭಿಯಾನ”ವನ್ನು ಆಯೋಜಿಸಿದೆ. ಇದೇ ತಿಂಗಳ 30ನೇ ತಾರೀಖಿನಿಂದ ಪ್ರಾರಂಭವಾಗಿ ಜೂನ್ 30ರಂದು ಕೊನೆಗಳ್ಳುತ್ತದೆ.
ವಿಶೇಷ ಸಂಪರ್ಕ ಅಭಿಯಾನಕ್ಕೆ ಮೇ 30ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ ಎನ್ನಲಾಗಿದೆ. 396 ಲೋಕಸಭಾ ಕ್ಷೇತ್ರಗಳಲ್ಲಿ ಸಾರ್ವಜನಿಕ ಸಭೆಗಳು ನಡೆಯಲಿದ್ದು, ಕೇಂದ್ರ ಸಚಿವರು ಹಾಗೂ ಪಕ್ಷದ ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ. ಅಲ್ಲದೆ ದೇಶದಾದ್ಯಂತ 51 ಬಿಜೆಪಿ ಹಿರಿಯ ನಾಯಕರ ರ್ಯಾಲಿಗಳನ್ನು ಆಯೋಜಿಸಲಾಗುತ್ತಿದೆ.
ಇದನ್ನೂ ಓದಿ:ಚುನಾವಣಾ ಸೋಲಿನಿಂದ ಕಂಗೆಟ್ಟ ನಿಖಿಲ್ ಕುಮಾರಸ್ವಾಮಿ! ಸಾಂತ್ವನ ಹೇಳಿದ ಡಿಕೆಶಿ
ಮುಂದಿನ ಲೋಕಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು ವಿಶೇಷ ರ್ಯಾಲಿಯನ್ನು ಅಯೋಜನೆ ಮಾಡಲಾಗುತ್ತಿದೆ ಎಂದು ರಾಜಕೀಯ ಪಂಡಿತರು ಲೆಕ್ಕಾಚಾರ ಹಾಕಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಸಾಧನೆಗಳನ್ನು ಸಾರ್ವಜನಿಕರಿಗೆ ತಲುಪಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿರಲಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ರಾಜ್ಯಗಳಲ್ಲಿ ಹಲವು ರ್ಯಾಲಿಗಳು ನಡೆಯುವ ಸಂಭವ ಹೆಚ್ಚಿದೆ ಎಂದು ಅಂದಾಜಿಸಲಾಗಿದೆ. ರ್ಯಾಲಿಗಳು ಹಾಗೂ ಸಾರ್ವಜನಿಕ ಸಭೆಗಳಿಗೆ ವಿವಿಧ ರಾಜ್ಯದ ಬಿಜೆಪಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರು, ಸಂಸದರು ಮತ್ತು ಶಾಸಕರನ್ನು ಕೂಡ ಆಹ್ವಾನಿಸಲಾಗುತ್ತದೆ ಎಂದು ವರದಿಯಾಗಿದೆ.
ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ವಿರೋಧ ಪಕ್ಷದ ನಾಯಕರು ಮತ್ತು ಇತರ ಪಕ್ಷದ ಹಿರಿಯ ನಾಯಕರು ರಾಜ್ಯ ರಾಜಧಾನಿಗಳಲ್ಲಿ ಮೇ 29ರಂದು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಅಲ್ಲದೆ ಸಾಮಾಜಿಕ ಜಾಲತಾಣಗಳ ವಿವಿಧ ಜನರೊಂದಿಗೆ ಸಂವಾದ ನಡೆಸಿ ಸರ್ಕಾರದ ಸಾಧನೆಗಳನ್ನು ಹಂಚಿಕೊಳ್ಳಲು ಯೋಜನೆ ರೂಪಿಸಲಾಗಿದೆ.
ಇದನ್ನೂ ಓದಿ:ನಿಜವಾಯ್ತು ಧಾರವಾಡದ ಗೊಂಬೆ ಭವಿಷ್ಯ!
ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ ಪತ್ರಿಕಾಗೋಷ್ಠಿ, ಗಣ್ಯ ವ್ಯಕ್ತಿಗಳ ಸಭೆ, ಸಾಮಾಜಿಕ ಮಾಧ್ಯಮದ ಪ್ರಭಾವಿಗಳ ಸಭೆ, ಉದ್ಯಮಿಗಳೊಂದಿಗೆ ಸಮಾವೇಶಗಳನ್ನು ಆಯೋಜಿಸಲಾಗುತ್ತಿದೆ. ಮೂರು ಹಂತದಲ್ಲಿ ಈ ಕಾರ್ಯಕ್ರಮಗಳು ನಡೆಯಲಿದೆ. ಅಲ್ಲದೆ ಜೂನ್ 21ರಂದು ನಡೆಯುವ ಯೋಗ ದಿನದಂದು ವಿಶೇಷ ಕಾರ್ಯಕ್ರಮ ಆಯೋಜಿಸಲು ಯೋಜನೆ ರೂಪಿಸಲಾಗಿದೆ.
ಅಭಿಯಾನದ ಭಾಗವಾಗಿ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರೊಂದಿಗೆ ವಿವಿಧ ಸಭೆ, ಸಮಾವೇಶ ನಡೆಸಲು ನಿರ್ಧರಿಸಿದೆ. ಜೂನ್ 23 ರಂದು ಶ್ಯಾಮ ಪ್ರಸಾದ್ ಮುಖರ್ಜಿ ಅವರ ತಿಥಿಯಂದು ಪ್ರಧಾನಿ ಮೋದಿ 10 ಲಕ್ಷ ಬೂತ್‌ಗಳಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ. ‘ಮಿಸ್ಡ್ ಕಾಲ್ ಅಭಿಯಾನ’ದ ಮೂಲಕ ಜೂನ್ 20 ರಿಂದ 30 ರವರೆಗೆ ಮನೆ-ಮನೆ ಸಂಪರ್ಕ ನಡೆಸಲು ಬಿಜೆಪಿ ಮುಂದಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 16 =
Remember me
