ನವದೆಹಲಿ:ಪೌರತ್ವ ತಿದ್ದುಪಡಿ ಜಾರಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಸಲ್ಲಿಕೆಯಾಗಿರುವ ದೂರುಗಳ ಆಧಾರದ ಮೇಲೆ ಎಫ್​ಐಆರ್​ ದಾಖಲಿಸುವಂತೆ ಪೊಲೀಸರಿಗೆ ಸೂಚನೆ ನೀಡಬೇಕು ಎಂದು ಭೀಮ್ ಸೇನೆಯ ಮುಖ್ಯಸ್ಥ ಚಂದ್ರಶೇಖರ್​ ಅಜಾದ್​ ಸುಪ್ರೀಂ ಕೊರ್ಟ್​ಗೆ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ.
ಈಶಾನ್ಯ ದೆಹಲಿಯ ಜಾಫರಾಬಾದ್ ಮತ್ತು ಮೌಜ್‌ಪುರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಗುಂಪು ಘರ್ಷಣೆ ಉಂಟಾಗಿ ಪೊಲೀಸ್​ ಮುಖ್ಯಪೇದೆ ಸೇರಿದಂತೆ 7 ಮಂದಿ ಬಲಿಯಾಗಿದ್ದಾರೆ. ಘರ್ಷಣೆಗೆ ಬಿಜೆಪಿ ಮುಖಂಡ ಕಪಿಲ್​ ಮಿಶ್ರಾ ಮಾಡಿದ ಭಾಷಣವೇ ಕಾರಣ ಹೀಗಾಗಿ ಸಲ್ಲಿಕೆಯಾಗಿರುವ ದೂರಿನ ಆಧಾರದ ಮೇಲೆ ಎಫ್​ಐಆರ್​ ದಾಖಲಿಸುವಂತೆ ದೆಹಲಿ ಪೊಲೀಸರಿಗೆ ಸೂಚನೆ ನೀಡಬೇಕು ಎಂದು ಅವರು ಅರ್ಜಿಯಲ್ಲಿ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.
ಈಶಾನ್ಯ ದೆಹಲಿಯಲ್ಲಿ ಶನಿವಾರ ರಾತ್ರಿಯಿಂದ ಪ್ರತಿಭಟನೆಗಳು ನಡೆಯುತ್ತಿವೆ. ಮೂರು ದಿನದಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ಸ್ಥಳದಿಂದ ತೆರವುಗೊಳಿಸಬೇಕು. ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ದೆಹಲಿಯಲ್ಲಿ ಇದ್ದಾರೆ. ಹೀಗಾಗಿ ನಾವು ಸುಮ್ಮನೆ ಇದ್ದೇವೆ. ಅವರು ತೆರಳಿದ ನಂತರ ಪ್ರತಿಭಟನೆ ಹೀಗೆ ಮುಂದುವರಿದರೇ ನಾವು ಬೀದಿಗೆ ಇಳಿಯಬೇಕಾಗುತ್ತದೆ ಎಂದು ಕಪಿಲ್​ ಮಿಶ್ರಾ ಅವರು ವಿಡಿಯೋದಲ್ಲಿ ಮಾತನಾಡಿರುವ ಹಿನ್ನೆಲೆಯಲ್ಲಿ ಘರ್ಷಣೆ ಅಧಿಕವಾಗಿದೆ ಎಂದು ಚಂದ್ರಶೇಖರ್​ ಅಜಾದ್​ ಆರೋಪಿಸಿದ್ದಾರೆ.
ಪ್ರತಿಭಟನೆ ನಡೆಸುತ್ತಿರುವವರಿಗೆ ಭದ್ರತೆ ಒದಗಿಸಬೇಕು ಎಂದು ಕೂಡ ಅಜಾದ್​ ಮನವಿ ಮಾಡಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + eleven =
Remember me
