ಮುಂಬೈ:ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ಅವಹೇನಕಾರಿ ಹೇಳಿಕೆ ಹಾಗೂ ಗುತ್ತಿಗೆ ನೇಮಕಾತಿ ವಿಚಾರವಾಗಿ ಮಹಾರಾಷ್ಟ್ರ ಸಚಿವ ಚಂದ್ರಕಾಂತ್ ಪಾಟೀಲ್​ ಮೇಲೆ ಭೀಮ್​ ಆರ್ಮಿ ಸದಸ್ಯರು ಇಂಕ್​ ಚೆಲ್ಲಿ ಆಕ್ರೋಶ ಹೊರಹಾಕಿರುವ ಘಟನೆ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ. ಬಂಧಿತನನ್ನು ಅಜಯ್​ ಮೆಂಡರ್​ಗಿಕರ್​ ಎಂದು ತಿಳಿದು ಬಂದಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಸೊಲ್ಲಾಪುರದಲ್ಲಿರುವ ಸರ್ಕಾರಿ ಗೆಸ್ಟ್​ಹೌಸ್​ಗೆ ಆಗಮಿಸುವ ಸಚಿವರನ್ನು ಭೇಟಿ ಮಾಡುವವರ ಸೋಗಿನಲ್ಲಿ ಬಂದ ವ್ಯಕ್ತಿಯೂ ಏಕಾಏಕಿ ಅವರ ಮೇಲೆ ದಾಳಿಗೆ ಯತ್ನಿಸಿದ್ದು, ಅವರ ಮೇಲೆ ಇಂಕ್​ ಎಸೆದಿದ್ದಾನೆ. ಕೂಡಲೇ ಅಲ್ಲಿದ್ದ ಪೊಲೀಸ್​ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದು, ಗುತ್ತಿಗೆ ಆಧಾರದಲ್ಲಿ ನೇಮಕಾತಿ, ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವುದನ್ನು ನೋಡಬಹುದಾಗಿದೆ.
आज#कंत्राटी_नोकरभरतीविरोधात#भीम_आर्मीच्या कार्यकर्त्याने#सोलापूरचे पालकमंत्री#चंद्रकांत_पाटीलयांच्यावर शाई फेकली आणि घोषणा दिल्या.परंतू तो युवक घोषणा देऊ नये म्हणुन पोलिसाने त्याचे तोंड दाबून ठेवले.आपण निवडून देतोय त्यांचा संविधानिक मार्गाने निषेध केला तर बिघडल कुठं?pic.twitter.com/ZeFo1eLz16
ಇದನ್ನೂ ಓದಿ:ಅಕ್ರಮವಾಗಿ ಜಲಗಡಿ ಪ್ರವೇಶಿಸಿದ ಆರೋಪ; ಭಾರತದ 27 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ
ಸಚಿವರು ಈ ಹಿಂದೆ ನೀಡಿದ್ದ ಹೇಳಿಕೆಯನ್ನು ಖಂಡಿಸಿ ಆತ ದಾಳಿ ಮಾಡಿರಬಹುದು ಎಂದು ಶಂಕಿಸಲಾಗಿದೆ. ವಿಚಾರಣೆ ನಡೆಯುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಕುರಿತು ಕಾರ್ಯಕ್ರಮ ಒಂದರಲ್ಲಿ ಅವಹೇನಕಾರಿಯಾಗಿ ಮಾತನಾಡಿದ್ದರು. ಈ ಸಂಬಂಧ ಮಹಾರಾಷ್ಟ್ರದಲ್ಲಿ ವ್ಯಾಪಕ ಪ್ರತಿಭಟನೆ ನಡೆದಿದ್ದವು. ತಾವು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕೂಡಲೇ ಕ್ಷಮೆಯಾಚಿಸಿ ತಮ್ಮ ಸಚಿನ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವಿಪಕ್ಷ ಸೇರಿದಂತೆ ಹಲವು ಸಂಘಟನೆಗಳು ಆಗ್ರಹಿಸಿದ್ದವು.
ಧಂಗರ್ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಬೇಕೆಂದುಉ ಆಗ್ರಹಿಸಿ ಕಳೆದ ತಿಂಗಳು ಸಚಿವ ರಾಧಾಕೃಷ್ಣ ವಿಕೆ ಪಾಟೀಲ್​ ಮೇಲೆ ವ್ಯಕ್ತಿಯೊಬ್ಬರು ಭಂಡಾರ (ಅರಿಶಿನ)ವನ್ನು ಚೆಲ್ಲಿ ಆಕ್ರೋಶ ಹೊರಹಾಕಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದವು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + one =
Remember me
