ಲಖನೌ:ಉತ್ತರ ಪ್ರದೇಶದ ಹತ್ರಾಸ್​ನಲ್ಲಿ ಸತ್ಸಂಗ ಕಾರ್ಯಕ್ರಮದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 121 ಮಂದಿ ಮೃತಪಟ್ಟ ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ. ಈ ಪ್ರಕರಣದಲ್ಲಿ ಆರು ಮಂದಿಯನ್ನು ಬಂಧಿಸಲಾಗಿದೆ. ಆದರೆ ದುರ್ಘಟನೆಗೆ ಪ್ರಮುಖ ಕಾರಣ ಎನ್ನಲಾದ ಭೋಲೆ ಬಾಬಾನನ್ನು ಈವರೆಗೆ ಯಾಕೆ ಬಂಧಿಸಿಲ್ಲ ಎಂಬ ಪ್ರಶ್ನೆಗಳಿಗೆ ಪೊಲೀಸರು ಉತ್ತರ ನೀಡಿದ್ದಾರೆ.
ಇದನ್ನೂ ಓದಿ:‘ನೀಟ್​ ರದ್ದು ಬೇಡ’: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 56 ನೀಟ್ ರ‍್ಯಾಂಕರ್‌ಗಳು
“ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭವಾಗಿದೆ. ಪ್ರಾಥಮಿಕ ಮಾಹಿತಿ ಆಧರಿಸಿ ಕೆಲವರನ್ನು ಬಂಧಿಸಿದ್ದೇವೆ. ಆದರೆ ಇದುವರೆಗೆ ಭೋಲೆ ಬಾಬಾ (ಸೂರಜ್ ಪಾಲ್) ಪತ್ತೆಯಾಗಿಲ್ಲ. ಆತನನ್ನು ವಿಚಾರಣೆಗೆ ಒಳಪಡಿಸಬೇಕಾಗಿದೆ. ನಾವು ಖಂಡಿತವಾಗಿಯೂ ಸ್ವರಾಜ್ ಪಾಲ್ ಅವರನ್ನು ವಿಚಾರಣೆ ಮಾಡುತ್ತೇವೆ, ಈ ಹಿನ್ನೆಲೆಯಲ್ಲಿ ಆಯೋಜನಾ ಸಮಿತಿಯಿಂದ ಮಾಹಿತಿ ಪಡೆಯಲಾಗಿದೆ ಎಂದು ಅಲಿಗಢ ರೇಂಜ್ ಐಜಿ ಶಲಾಬ್ ಮಾಥುರ್ ತಿಳಿಸಿದ್ದಾರೆ.
ತಲೆಮರೆಸಿಕೊಂಡಿರುವ ಬೋಲೆ ಬಾಬಾನಿಗಾಗಿ ಪೊಲೀಸ್ ತಂಡ ಶೋಧ ನಡೆಸುತ್ತಿದೆ. ಆತನ ಪತ್ತೆಗೆ ಬಹುಮಾನ ಸಹ ಘೋಷಿಸಿದ್ದೇವೆ. ಕಾಲ್ತುಳಿತದಲ್ಲಿ ಇತರರ ಕೈವಾಡದ ಬಗ್ಗೆಯೂ ತನಿಖೆ ನಡೆಸುತ್ತಿದ್ದೇವೆ ಎಂದು ಅವರು ಮಾಥುರ್​ ಹೇಳಿದ್ದಾರೆ.
ಉತ್ತರ ಪ್ರದೇಶದ ಸೂರಜ್ ಪಾಲ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆತ ತಪ್ಪಿತಸ್ಥನೆಂದು ಸಾಬೀತಾಗಿತ್ತು. ಕೆಲವು ವರ್ಷಗಳ ಜೈಲು ಶಿಕ್ಷೆ ಸಹ ಅನುಭವಿಸಿದ್ದ. ಆದರೆ ಹೊರಗೆ ಬಂದ ನಂತರ ಬಾಬಾ ಅವತಾರವೆತ್ತಿದ್ದು, ಈಗ ಈ ಘೋರ ದುರಂತ ಸಂಭವಿಸಿದೆ.
ವಾಯು ಮಾಲಿನ್ಯ: ದೆಹಲಿಗೆ ಮಾತ್ರವಲ್ಲ, ಬೆಂಗಳೂರಿಗೂ ಎಚ್ಚರಿಕೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × three =
Remember me
