ನವದೆಹಲಿ:ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ್ದು, ಭೂಪೇಂದ್ರ ಪಟೇಲ್​ಗೆ ಮತ್ತೊಮ್ಮೆ ಸಿಎಂ ಆಗುವ ಅವಕಾಶ ಒಲಿದಿದೆ.
ಡಿ.12ರಂದು ಅಹಮದಬಾದ್​ನ ಮೋದಿ ಸ್ಟೇಡಿಯಂನಲ್ಲಿ ಸಿಎಂ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಗುಜರಾತ್​ನಲ್ಲಿ ಸತತ 7ನೇ ಬಾರಿಯೂ ಬಿಜೆಪಿ ಗೆಲುವು ಸಾಧಿಸಿದ್ದು, ಈ ಗೆಲುವಿಗೆ ಬಿಜೆಪಿ ಕಾರ್ಯಕರ್ತರೇ ಕಾರಣ ಎಂದು ಭೂಪೇಂದ್ರ ಪಟೇಲ್​ ಸಂತಸ ಹಂಚಿಕೊಂಡಿದ್ದಾರೆ. ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಸಭೆ ಕರೆದಿದ್ದಾರೆ.
ನಮ್ಮ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ. ಅವರ ಅಸಾಧಾರಣ ಪರಿಶ್ರಮವೇ ಈ ಐತಿಹಾಸಿಕ ಗೆಲುವಿಗೆ ಕಾರಣ. ಅಭಿವೃದ್ಧಿಗೆ ಗುಜರಾತಿಗರು ಮನ್ನಣೆ ನೀಡಿದ್ದಾರೆ. ನಮ್ಮನ್ನು ಆಶೀರ್ವದಿಸಿದ ಗುಜರಾತಿಗರಿಗೆ ಧನ್ಯವಾದಗಳು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮೂಲಕ ಧನ್ಯವಾದ ತಿಳಿಸಿದ್ದಾರೆ.
ಮೊರ್ಬಿ ಸೇತುವೆ ದುರಂತದ ವೇಳೆ ನದಿಗೆ ಜಿಗಿದು ಜನರನ್ನು ರಕ್ಷಿಸಿದ್ದ ಬಿಜೆಪಿ ಅಭ್ಯರ್ಥಿ ಗೆಲುವು

ಪಿಯು ಪಾಸಾದವರಿಗೆ ಕೇಂದ್ರ ಸರ್ಕಾರಿ ಹುದ್ದೆ: ಎಸ್​ಎಸ್​ಸಿಯಿಂದ 4,500 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 19 =
Remember me
