ಗಾಂಧಿನಗರ:ಘಾಟ್​ಲೋಡಿಯಾದ ಬಿಜೆಪಿ ಶಾಸಕರಾದ ಭೂಪೇಂದ್ರಭಾಯಿ ಪಟೇಲ್​ ಅವರು ಇಂದು ಗುಜರಾತ್​ನ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. 59 ವರ್ಷ ವಯಸ್ಸಿನ ಪಟೇಲ್​ ಅವರು ರಾಜ್ಯದ 17ನೇ ಮುಖ್ಯಮಂತ್ರಿಗಳಾಗಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್​ ಷಾ, ಹರಿಯಾಣ ಸಿಎಂ ಮನೋಹರ್​ ಲಾಲ್​ ಖಟ್ಟರ್​, ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್​ ಚೌಹಾನ್ ಮತ್ತು ಗೋವಾ ಸಿಎಂ ಪ್ರಮೋದ್​ ಸಾವಂತ್​ ಮತ್ತು ರಾಜ್ಯದ ಹಿರಿಯ ನಾಯಕರು ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿ, ಪಟೇಲ್​ ಅವರಿಗೆ ಶುಭ ಕೋರಿದರು.
ಇದನ್ನೂ ಓದಿ:ಇರುಳಿಗರಿಗೆ ಸ್ಪಂದಿಸದ ಜಿಲ್ಲಾಡಳಿತ ; 202 ದಿನ ಪೂರೈಸಿದ ಪ್ರತಿಭಟನೆ
ಶನಿವಾರದಂದು ನಿಕಟಪೂರ್ವ ಸಿಎಂ ವಿಜಯ್​ ರೂಪಾನಿ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಹುದ್ದೆ ತೆರವಾಗಿತ್ತು. ಭಾನುವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಭೂಪೇಂದ್ರ ಪಟೇಲ್​ ಅವರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಲಾಗಿತ್ತು.
2017 ರ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಶಾಸಕರಾದ ಭೂಪೇಂದ್ರ ಪಟೇಲ್​ ಅವರು, ಕಾಂಗ್ರೆಸ್​ನ ಶಶಿಕಾಂತ್​ ಪಟೇಲ್​ ವಿರುದ್ಧ 1 ಲಕ್ಷ 17 ಸಾವಿರ ಮತಗಳ ದಾಖಲೆ ಅಂತರದಲ್ಲಿ ಗೆದ್ದಿದ್ದರು ಎನ್ನಲಾಗಿದೆ.(ಏಜೆನ್ಸೀಸ್)
ನೋಡನೋಡುತ್ತಿದ್ದಂತೆ ಕುಸಿದುಬಿದ್ದ ಬಹುಮಹಡಿ ಕಟ್ಟಡ! ಅವಶೇಷಗಳಡಿ ಸಿಲುಕಿರುವವರಿಗಾಗಿ ಹುಡುಕಾಟ
ತಾರಾಸಂಗಮ: ರಣವೀರ್​, ದೀಪಿಕಾ ಜೊತೆ ಪಿ.ವಿ.ಸಿಂಧು ಡಿನ್ನರ್!
ಆತ್ಮಹತ್ಯೆಗೆ ತಯಾರಾಗಿದ್ದವನ ಪ್ರಾಣ ರಕ್ಷಿಸಿದ ಪೊಲೀಸರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 3 =
Remember me
