ನವದೆಹಲಿ:ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ 18ನೇ ಜಿ-20 ಶೃಂಗಸಭೆಯನ್ನು ಆಯೋಜಿಸಲು ರಾಷ್ಟ್ರ ರಾಜಧಾನಿ ನವದೆಹಲಿ ಮದುವಣಗಿತ್ತಿಯಂತೆ ಸಜ್ಜಾಗಿದೆ. 25ಕ್ಕೂ ಹೆಚ್ಚು ದೇಶದ ನಾಯಕರು ಮತ್ತು ಪ್ರತಿನಿಧಿಗಳ ಉಪಸ್ಥಿತಿಗೆ ಸಭೆ ಸಾಕ್ಷಿಯಾಗಲಿದೆ.
ಇನ್ನು ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕ ಅಧ್ಯಕ್ಷ ಜೋ ಬೈಡನ್​ ಅವರು ನವದೆಹಲಿಗೆ ಆಗಮಿಸಿದ್ದಾರೆ. ಅವರನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ರಾಜ್ಯ ಖಾತೆ ಸಚಿವ ವಿ.ಕೆ. ಸಿಂಗ್​ ಸ್ವಾಗತಿಸಿದ್ದಾರೆ.
ಜೋ ಬೈಡನ್ ಜೊತೆ ಅಮೆರಿಕಾ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್, ಸಿಬ್ಬಂದಿ ಉಪ ಮುಖ್ಯಸ್ಥ ಜೆನ್ ಒ’ಮ್ಯಾಲಿ ದಿಲ್ಲನ್ ಮತ್ತು ಓವಲ್‌ನ ನಿರ್ದೇಶಕರು ಸೇರಿದಂತೆ ಏರ್ ಫೋರ್ಸ್ ಒನ್‌ನ ಪ್ರಮುಖ ವ್ಯಕ್ತಿಗಳು ಆಗಮಿಸಿದ್ದಾರೆ.
Prime Minister@narendramodiand@POTUS@JoeBidenare holding talks at 7, Lok Kalyan Marg in Delhi.Their discussions include a wide range of issues and will further deepen the bond between India and USA. 🇮🇳 🇺🇸pic.twitter.com/PWGBOZIwNT
ಇದನ್ನೂ ಓದಿ: ​ಅಸ್ತಿತ್ವಕ್ಕಾಗಿ ಬಿಜೆಪಿ ಜೊತೆಗಿನ ಮೈತ್ರಿ ಅನಿವಾರ್ಯ: ಜಿ.ಟಿ. ದೇವೇಗೌಡ
ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್​ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಫೈಟರ್​ ಜೆಟ್​ ಇಂಜಿನ್​ಗಳ ಒಪ್ಪಂದ, 6ಜಿ ನೆಟ್​ವರ್ಕ್​ ಸೇರಿದಂತೆ ಆಧುನಿಕ ತಂತ್ರಜ್ಞಾನಗಳ ಕುರಿತು ಚರ್ಚಿಸುತ್ತಾರೆ ಎಂದು ವರದಿಯಾಗಿದೆ.
ಸೆಪ್ಟೆಂಬರ್ 10ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು G20 ಪ್ರೆಸಿಡೆನ್ಸಿ ಬ್ಯಾಟನ್​ಅನ್ನು ಬ್ರೆಜಿಲ್ ಅಧ್ಯಕ್ಷ ಲುಲಾ ಅವರಿಗೆ ಹಸ್ತಾಂತರಿಸಲಿದ್ದಾರೆ. ಅಧಿಕೃತವಾಗಿ ಬ್ರೆಜಿಲ್​ನ G20 ಪ್ರೆಸಿಡೆನ್ಸಿಯ ಅವಧಿ ಡಿಸೆಂಬರ್ 1ರಿಂದ ಪ್ರಾರಂಭವಾಗಲಿದೆ.
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:fifteen + three =
Remember me
