ನವದೆಹಲಿ:ಕೋವಿಡ್​-19 ಸೋಂಕಿಗೆ ತುತ್ತಾಗಿ ಶನಿವಾರ ತಡರಾತ್ರಿ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿರುವ ಬಾಲಿವುಡ್​ ದಿಗ್ಗಜ, ಬಿಗ್​ಬಿ ಅಮಿತಾಭ್​ ಬಚ್ಚನ್​, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಚಿತ್ರವನ್ನು ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನ ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ನಾನು ಶನಿವಾರ ಸಂಜೆ ಕೋವಿಡ್​-19 ಸೋಂಕಿಗೆ ತುತ್ತಾಗಿರುವುದು ಖಚಿತಪಟ್ಟಿತು… ಆಸ್ಪತ್ರೆಗೆ ದಾಖಲಾಗಿದ್ದೇನೆ… ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ… ಕುಟುಂಬದವರು ಮತ್ತು ಸಹಾಯಕ ಸಿಬ್ಬಂದಿ ಪರೀಕ್ಷೆಗೆ ಒಳಪಟ್ಟಿದ್ದು, ಫಲಿತಾಂಶ ನಿರೀಕ್ಷಿಸಲಾಗುತ್ತಿದೆ… ಕಳೆದ 10 ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ದಯವಿಟ್ಟು ಕೋವಿಡ್​ ಪರೀಕ್ಷೆ ಮಾಡಿಸಿಕೊಳ್ಳಿ ಎಂಬ ಸಂದೇಶದೊಂದಿಗೆ ಈ ಚಿತ್ರವನ್ನು ಬಿಗ್​ಬಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ:ಜಪ್ಪಯ್ಯ ಎಂದ್ರೂ ಮಾಸ್ಕ್‌ ಧರಿಸಲು ಒಪ್ಪದ ಟ್ರಂಪ್‌ ಹೀಗೆ ಕಾಣಿಸಿಕೊಂಡದ್ದೇಕೆ?
ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಅಮಿತಾಭ್​ ಬಚ್ಚನ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಪುತ್ರ ಅಭಿಷೇಕ್​ ಬಚ್ಚನ್​ ಕೂಡ ಸೋಂಕಿಗೆ ತುತ್ತಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಬಿಗ್​ಬಿ ಪತ್ನಿ ಜಯಾ ಬಚ್ಚನ್​ ಹಾಗೂ ಅಭಿಷೇಕ್​ ಪತ್ನಿ ಐಶ್ವರ್ಯ ರೈ ಬಚ್ಚನ್​ ಹಾಗೂ ಪುತ್ರಿ ಆರಾಧ್ಯ ಅವರನ್ನು ಪರೀಕ್ಷಿಸಿದಾಗ ಅವರಿಗೆ ಸೋಂಕಿ ತಗುಲದೇ ಇರುವುದು ಖಚಿತಪಟ್ಟಿದೆ ಎಂದು ನಾನಾವತಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಮನೆಯಲ್ಲಿ ಇರುವಾಗಲೇ ಅಮಿತಾಭ್​ ಬಚ್ಚನ್​ ಅವರಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದಿದ್ದವು. ಲಕ್ಷಣ ಸೌಮ್ಯವಾಗಿದ್ದರಿಂದ ಅವರು ತಮ್ಮ ಮನೆಯಲ್ಲೇ ಸ್ವಪ್ರೇರಣೆಯ ಕ್ವಾರಂಟೈನ್​ಗೆ ಒಳಗಾಗಿದ್ದರು. ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾದರು ಎನ್ನಲಾಗಿದೆ.
vijayavani.net/outrage-as-muslim-fanatics-dig-up-three-day-old-girls-body-from-cemetery/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
