ನವದೆಹಲಿ:ಐಎನ್‌ಡಿಐಎ ಮೈತ್ರಿಕೂಟದ ಪಾಲುದಾರ ಕಾಂಗ್ರೆಸ್ ಜತೆಗಿನ ಸಂಬಂಧ ಹಳಸುತ್ತಿದೆ ಎಂಬ ವರದಿಗಳನ್ನು ಆಮ್​ ಆದ್ಮಿ ಪಾರ್ಟಿ ತಳ್ಳಿಹಾಕಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಜತೆಗಿನ ಮೈತ್ರಿ ಅಸ್ತಿತ್ವದಲ್ಲಿದೆ ಎಂದಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ದೆಹಲಿಯ 7 ಸೀಟುಗಳಲ್ಲಿ ಕಾಂಗ್ರೆಸ್ ಜತೆಗಿನ ಸೀಟು ಹಂಚಿಕೆ ಕುರಿತು ಒಪ್ಪಂದ ಅಂತಿಮ ಹಂತದಲ್ಲಿದೆ ಎಂದು ಎಎಪಿ ತಿಳಿಸಿದೆ.
ಇದನ್ನೂ ಓದಿ:ಕಿಂಗ್​ ಕೊಹ್ಲಿ ಮಗ ಅಕಾಯ್‌ ಹೆಸರಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ!
ರಾಷ್ಟ್ರ ರಾಜಧಾನಿಯ ಏಳು ಲೋಕಸಭಾ ಕ್ಷೇತ್ರಗಳಲ್ಲಿ ಸೀಟು ಹಂಚಿಕೆಯ ಸಂಬಂಧಿಸಿದಂತೆ ಮಾತುಕತೆ ನಡೆಸಲು ಆಮ್​ ಆದ್ಮಿ ಪಕ್ಷ ಸಿದ್ಧವಾಗಿದೆ ಎಂದು ಎಎಪಿ ವಕ್ತಾರರು ಹೇಳಿದ್ದಾರೆ. ಇಂಡಿಯಾ ಮೈತ್ರಿಕೂಟದ ಜತೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟನೆ ನೀಡಿದೆ.
ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಕಾಂಗ್ರೆಸ್​​ ಜೊತೆಗಿನ ಮಾತುಕತೆಯ ನಂತರ ಈ ನಿರ್ಧಾರಕ್ಕೆ ಬರಲಾಗಿದೆ. ನಮ್ಮ ನಡುವೆ ಎಲ್ಲವೂ ಚೆನ್ನಾಗಿದೆ, ಚೆನ್ನಾಗಿ ಅಂತ್ಯಗೊಳ್ಳಲಿದೆ. ಇಲ್ಲಿ ಯಾವುದೇ ವಿವಾದ ಇಲ್ಲ. ನಮ್ಮ ನಡುವೆ ಮೈತ್ರಿ ಇರಲಿದೆ. ಎಲ್ಲವೂ ಶೀಘ್ರದಲ್ಲಿಯೇ ಸ್ಪಷ್ಟವಾಗಲಿದೆ ಎಂದಿದ್ದಾರೆ.
ಪಂಜಾಬ್‌ನಲ್ಲಿ ಯಾವುದೇ ಮೈತ್ರಿ ಇಲ್ಲ ಎಂದು ದಿಲ್ಲಿ ಸಿಎಂ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದರು. ಪಂಜಾಬ್‌ನ ಎಲ್ಲಾ 13 ಹಾಗೂ ಚಂಡೀಗಡ ಕೇಂದ್ರಾಡಳಿತ ಪ್ರದೇಶದ 1 ಸ್ಥಾನ ಸೇರಿದಂತೆ 14 ಲೋಕಸಭೆ ಕ್ಷೇತ್ರಗಳಲ್ಲಿ ಎಎಪಿ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಕೇಜ್ರಿವಾಲ್ ಪ್ರಕಟಿಸಿದ್ದರು. ಈ ಹೇಳಿಕೆಯಿಂದ ಐಎನ್‌ಡಿಐಎ ಬ್ಲಾಕ್‌ಗೆ ದೊಡ್ಡ ಹೊಡೆತ ಕೊಟ್ಟಿತ್ತು.
ಇದೀಗ ದೆಹಲಿಯಲ್ಲಿ ಕಾಂಗ್ರೆಸ್​ ಮತ್ತು ಎಎಪಿ ಮೈತ್ರಿಯಾಗುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದ್ದು, ಇದರ ಪ್ರಭಾವ ಪಂಜಾಬ್​ನಲ್ಲೂ ಪ್ರಭಾವ ಬೀಳಬಹುದೇ ಎಂದು ಅಂದಾಜಿಸಲಾಗಿದೆ. ನಮ್ಮ ಕೈಗಳನ್ನು ನೀವು ಬಲಪಡಿಸಿದಷ್ಟೂ, ನಾವು ಹೆಚ್ಚಿನ ಕೆಲಸಗಳನ್ನು ಮಾಡುವುದು ಸಾಧ್ಯವಾಗುತ್ತದೆ ಎಂದು ಕ್ರೇಜಿವಾಲ್​ ಹೇಳಿದ್ದರು.
ಇನ್ನು ಎರಡು ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಪಂಜಾಬ್‌ನಲ್ಲಿ 13 ಮತ್ತು ಚಂಡೀಗಡದಲ್ಲಿ 1 ಸೀಟು ಇವೆ. ಮುಂದಿನ 10- 15 ದಿನಗಳಲ್ಲಿ ಈ ಎಲ್ಲಾ 14 ಸ್ಥಾನಗಳಿಗೆ ಎಎಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಲಿದೆ. ಎರಡು ವರ್ಷಗಳ ಹಿಂದಿನಂತೆ (ಪಂಜಾಬ್ ವಿಧಾನಸಭೆ ಚುನಾವಣೆಯ) ನಿಮ್ಮ ಆಶೀರ್ವಾದ ನೀಡುವಂತೆ ಮತ್ತು ಎಎಪಿ ಎಲ್ಲಾ 14 ಸೀಟುಗಳಲ್ಲಿ ಗೆಲ್ಲುವಂತೆ ನೋಡಿಕೊಳ್ಳುವುದನ್ನು ಕೋರುತ್ತೇನೆ ಎಂದಿದ್ದರು ಏನೇ ಇರಲಿ. ಪಂಜಾಬ್‌ನಲ್ಲಿ ನೆಲೆಯನ್ನು ಕಂಡುಕೊಳ್ಳಲು ಕಾಂಗ್ರೆಸ್-ಎಎಪಿಯ ಶತ ಪ್ರಯತ್ನ ಮಾಡುತ್ತಿದೆ.
Viral Video: ಚಟಕ್ಕೆ ಹೋಗುತ್ತಿದ್ದರೂ ಚಟ ಬಿಡಲಿಲ್ಲ: ಐಸಿಯುನಲ್ಲಿ ತಂಬಾಕು ತಿಕ್ಕಿದ ಭೂಪ! ವಿಡಿಯೋ ವೈರಲ್​

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × three =
Remember me
