ನವದೆಹಲಿ:ದಿಲ್ಲಿ ಲಿಕ್ಕರ್ ಹಗರಣದಲ್ಲಿ ಬಂಧಿತರಾಗಿದ್ದ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ ಕೆಲವೇ ಗಂಟೆಗಳ ನಂತರ ಆಮ್​ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಶುಕ್ರವಾರ ಸಂಜೆ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.
ಇದನ್ನೂ ಓದಿ:ಧೈರ್ಯ ಇದ್ದರೆ ಗಂಡಸ್ತನದಿಂದ ರಾಜಕೀಯ ಮಾಡಬೇಕು: ಡಿಕೆಶಿ ವಿರುದ್ಧ ಕುಮಾರಸ್ವಾಮಿ ಆಕ್ರೋಶ
ಫೆಬ್ರವರಿ 2023 ರಲ್ಲಿ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿತ್ತು. ಸಿಸೋಡಿಯಾ ಬಂಧಮುಕ್ತರಾಗುತ್ತಿದ್ದಂತೆ ಎಎಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ತೆರೆದ ವಾಹನದಲ್ಲಿ ಸಿಸೋಡಿಯಾ ಮೆರವಣಿಗೆ ನಡೆಸಿದ್ದು, ಕಾರ್ಯಕರ್ತರು ಮತ್ತು ಬೆಂಬಲಿಗರು ಹೂವಿನ ಮಳೆಗೆರೆದು ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು.
ತಿಹಾರ್​ ಜೈಲಿನಿಂದ ಬಿಡುಗಡೆ ನಂತರ ಮಾತನಾಡಿದ ಅವರು, ಇಂದು ನಾನು ನಿಮ್ಮಿಂದ ಮತ್ತು ಬಾಬಾ ಸಾಹೇಬರ ಸಂವಿಧಾನದಿಂದ ಹೊರಬಂದಿದ್ದೇನೆ, ಸರ್ವಾಧಿಕಾರದ ವಿರುದ್ಧ ಮಾತನಾಡುವ ಸಾಮಾನ್ಯ ವ್ಯಕ್ತಿಯನ್ನು ನೀವು ಜೈಲಿಗೆ ಹಾಕಿದರೆ, ಸಂವಿಧಾನ ಅವರನ್ನು ಕಾಪಾಡುತ್ತದೆ. ಇದು ಸಂವಿಧಾನದ ಶಕ್ತಿ, ಅರವಿಂದ್ ಕೇಜ್ರಿವಾಲ್ ಶೀಘ್ರದಲ್ಲೇ ಹೊರಬರುತ್ತಾರೆ ಎಂದರು.
ಸರ್ವಾಧಿಕಾರಿ ಇಡೀ ಪ್ರತಿಪಕ್ಷಗಳನ್ನು ಜೈಲಿಗೆ ಹಾಕುವ ಕನಸು ಕಂಡಿದ್ದರು. ಇದೇ ಸಂವಿಧಾನದ ನೆರವಿನಿಂದ ಅರವಿಂದ್ ಕೇಜ್ರಿವಾಲ್ ಕೂಡ ಜೈಲಿನಿಂದ ಹೊರಬರಲಿದ್ದಾರೆ. ಜೈಲ್ ಕೆ ತಾಲೇ ಟೂಟೇಂಗೆ, ಅರವಿಂದ್ ಕೇಜ್ರಿವಾಲ್ ಚೂಟೇಂಗೆ ಎಂದು ಹೇಳಿದ್ದಾರೆ.
ಈ ಷರತ್ತುಗಳ ಮೇಲೆ ಜಾಮೀನು: ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್, ‘ಅವರು ಸಮಾಜದ ಗೌರವಾನ್ವಿತ ವ್ಯಕ್ತಿಯಾಗಿದ್ದು, ಅವರು ತಲೆಮರೆಸಿಕೊಳ್ಳುವ ಸಾಧ್ಯತೆಯಿಲ್ಲ. ಈ ಪ್ರಕರಣದಲ್ಲಿ ಹೆಚ್ಚಿನ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗಿದೆ, ಆದ್ದರಿಂದ ಅದನ್ನು ತಿರುಚುವ ಸಾಧ್ಯತೆಯಿಲ್ಲ. ಆದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಅಥವಾ ಬೆದರಿಸುವ ಸಂದರ್ಭದಲ್ಲಿ ಷರತ್ತುಗಳನ್ನು ವಿಧಿಸಬಹುದು ಎಂದು ಹೇಳಿತು.
ಸುಪ್ರೀಂ ಕೋರ್ಟ್ ಮನೀಶ್ ಸಿಸೋಡಿಯಾಗೆ 10 ಲಕ್ಷ ರೂಪಾಯಿ ಬಾಂಡ್ ಮೇಲೆ ಜಾಮೀನು ನೀಡಿದೆ. ಇದಲ್ಲದೆ ಎರಡು ದೊಡ್ಡ ಷರತ್ತುಗಳನ್ನೂ ವಿಧಿಸಲಾಗಿದೆ. ಮೊದಲ ಷರತ್ತು ಅವರು ತಮ್ಮ ಪಾಸ್ಪೋರ್ಟ್ ಅನ್ನು ಕೋರ್ಟ್‌ಗೆ ಸಲ್ಲಿಸಬೇಕು. ಮತ್ತು ಎರಡನೇ ಷರತ್ತು ಎಂದರೆ ಅವರು ಪ್ರತಿ ಸೋಮವಾರ ಮತ್ತು ಗುರುವಾರ ಪೊಲೀಸ್ ಠಾಣೆಗೆ ಹೋಗಿ ತಮ್ಮ ಹಾಜರಾತಿಯನ್ನು ಮಾಡಬೇಕಾಗುತ್ತದೆ.
ಕಡತಕ್ಕೆ ಸಹಿ ಹಾಕಲು 10 ವರ್ಷ ಕಾಯಬೇಕಿತ್ತೇ? ಸಿಎಂಗೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen + nineteen =
Remember me
